Advertisement

ಶಾಂತಿ ಪ್ರಕ್ರಿಯೆಯಲ್ಲಿ ಭಾರತದ್ದೂ ಪಾಲಿದೆ

12:00 PM Jul 11, 2018 | Harsha Rao |

ಹೊಸದಿಲ್ಲಿ: ಕೊರಿಯಾ ಪರ್ಯಾಯ ದ್ವೀಪದಲ್ಲಿನ ಶಾಂತಿ ಪ್ರಕ್ರಿಯೆಯಲ್ಲಿ ಭಾರತವೂ ಪಾಲುದಾರ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಂಗಳವಾರ ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್‌ ಜೇ ಅವರೊಂದಿಗೆ ನಡೆದ ದ್ವಿಪಕ್ಷೀಯ ಮಾತುಕತೆ ಬಳಿಕ ಅವರು ಈ ಹೇಳಿಕೆ ನೀಡಿದ್ದಾರೆ.

Advertisement

ಈಶಾನ್ಯ ಏಷ್ಯಾ ಹಾಗೂ ದಕ್ಷಿಣ ಏಷ್ಯಾ ನಡುವಿನ ನಂಟು ಭಾರತಕ್ಕೆ ಕಳವಳಕಾರಿಯಾಗಿದೆ. ಹೀಗಾಗಿ, ಭಾರತ ಕೂಡ ಕೊರಿಯಾ ದ್ವೀಪದಲ್ಲಿ ಶಾಂತಿಯನ್ನು ಬಯಸುತ್ತದೆ. ಪಾಕಿಸ್ಥಾನದ ಜೊತೆ ಉತ್ತರ ಕೊರಿಯಾ ಹೊಂದಿರುವ ಅಣ್ವಸ್ತ್ರ ನಂಟಿನ ಕುರಿತು ತನಿಖೆಯಾಗ ಬೇಕು. ಅದಕ್ಕೆ ಕಾರಣೀಕರ್ತರಾದವರನ್ನು ಹೊಣೆಗಾರರ ನ್ನಾಗಿ ಸಬೇಕು ಎಂದು ಭಾರತ ಒತ್ತಾಯಿಸುತ್ತದೆ ಎಂದೂ ಮೋದಿ ಹೇಳಿದ್ದಾರೆ.

ಮಾತುಕತೆ ವೇಳೆ, ಎರಡೂ ರಾಷ್ಟ್ರಗಳ ನಡುವಿನ ವ್ಯಾಪಾರ, ಭದ್ರತೆ, ಕೃತಕ ಬುದ್ಧಿಮತ್ತೆ, ರಕ್ಷಣಾ ಸಹಕಾರ ವೃದ್ಧಿ, ಪ್ರಾದೇಶಿಕ ಶಾಂತಿ ಮತ್ತು ಸಾಮೂಹಿಕ ನಾಶದ ಶಸ್ತ್ರಗಳ ನಾಶ ಮತ್ತಿತರ ಕ್ಷೇತ್ರಗಳಲ್ಲಿ ಸಹಕಾರ ಸಾಧಿಸುವ ಬಗ್ಗೆ ಒಪ್ಪಂದ ಏರ್ಪಟ್ಟಿದೆ. ಇದೇ ವೇಳೆ, ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದವನ್ನು ಮೇಲ್ದರ್ಜೆಗೇ ರಿಸುವ ಕುರಿತ ಕಡತಕ್ಕೆ ಎರಡೂ ದೇಶಗಳು ಸಹಿ ಮಾಡಿ ದ್ದು ಮಾತ್ರವಲ್ಲದೆ, ಒಟ್ಟು 10 ಒಪ್ಪಂದಗಳನ್ನೂ ಮಾಡಿಕೊಂಡಿವೆ.

Advertisement

Udayavani is now on Telegram. Click here to join our channel and stay updated with the latest news.

Next