Advertisement

ಯೋಧರಿಗೆ ಸಲಾಂ; ಕಣಿವೆ ರಾಜ್ಯದಲ್ಲಿ 6 ತಿಂಗಳಲ್ಲೇ 92 ಉಗ್ರರು ಫಿನಿಶ್

04:52 PM Jul 06, 2017 | Team Udayavani |

ನವದೆಹಲಿ:ಭಯೋತ್ಪಾದಕರನ್ನು ಮಟ್ಟ ಹಾಕುವಲ್ಲಿ ಭಾರತೀಯ ಮಿಲಿಟರಿ ಪಡೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುಕ್ತ ಸ್ವಾತಂತ್ರ್ಯ ನೀಡಿರುವುದು ಧನಾತ್ಮಕ ಫಲಿತಾಂಶ ಪಡೆಯುವಲ್ಲಿ ಸಹಕಾರಿಯಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

Advertisement

ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಾರ, ಪ್ರಸಕ್ತ ಸಾಲಿನ ಜುಲೈವರೆಗೆ ಭಾರತೀಯ ಯೋಧರು ಭಯೋತ್ಪಾದಕರ ವಿರುದ್ಧ ನಡೆಸಿದ ಕಾರ್ಯಾಚರಣೆಯಲ್ಲಿ ಬರೋಬ್ಬರಿ 92 ಉಗ್ರರನ್ನು ಹೊಡೆದುರುಳಿಸಿದ್ದಾರೆ.

2012 ಮತ್ತು 2013ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಮೈತ್ರಿಕೂಟ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಇದ್ದಾಗಲೂ ಈ ಪ್ರಮಾಣದ ಉಗ್ರರು ಯೋಧರ ಕಾರ್ಯಾಚರಣೆಯಲ್ಲಿ ಬಲಿಯಾಗಿರಲಿಲ್ಲವಾಗಿತ್ತು ಎಂದು ವರದಿ ವಿವರಿಸಿದೆ.

ಜಮ್ಮು ಕಾಶ್ಮೀರದಲ್ಲಿ ಜುಲೈ ತಿಂಗಳವರೆಗೆ 92 ಉಗ್ರರು ಬಲಿಯಾಗಿದ್ದಾರೆ. ಅದರಲ್ಲೂ ಕಾಶ್ಮೀರ ಕಣಿವೆಯಲ್ಲಿನ ಮೋಸ್ಟ್ ವಾಂಟೆಡ್ ಉಗ್ರರು ಸೇರಿರುವುದಾಗಿ ವರದಿ ತಿಳಿಸಿದೆ. ಅಷ್ಟೇ ಅಲ್ಲ ಗಡಿಭಾಗದಲ್ಲಿ ಒಳನುಸುಳುವ ಉಗ್ರರ ಸಂಖ್ಯೆಯಲ್ಲಿಯೂ ಇಳಿಕೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next