ನವದೆಹಲಿ: ಆರು ಬಾರಿಯ ವಿಶ್ವ ಚಾಂಪಿಯನ್ ಆಗಿದ್ದ ಮತ್ತು 2012 ರ ಒಲಿಂಪಿಕ್ ಪದಕ ವಿಜೇತ ಮೇರಿ ಕೋಮ್ ಬಾಕ್ಸಿಂಗ್‌ನಿಂದ ನಿವೃತ್ತಿ ಘೋಷಿಸಿದ್ದಾರೆ.
ಬುಧವಾರ ರಾತ್ರಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ತಮ್ಮ ನಿವೃತ್ತಿಯ ವಿಷಯವನ್ನು ಘೋಷಿಸಿದ್ದಾರೆ. ಕಾಮನ್‌ವೆಲ್ತ್ ಗೇಮ್ಸ್ 2022ರ ಟ್ರಯಲ್ಸ್‌ನಲ್ಲಿ ಮೇರಿ ಕೋಮ್ ತಮ್ಮ ಕೊನೆಯ ಪಂದ್ಯವನ್ನು ಆಡಿದ್ದರು.
ಈ ಕುರಿತು ಹೇಳಿಕೆ ನೀಡಿದ ಅವರು ‘ನಾನು ನನ್ನ ಜೀವನದಲ್ಲಿ ಎಲ್ಲವನ್ನೂ ಸಾಧಿಸಿದ್ದೇನೆ. ನನಗೆ ಇನ್ನೂ ಸ್ಪರ್ಧಿಸುವ ಹಸಿವು ಇದೆ, ಆದರೆ ಅಂತರಾಷ್ಟ್ರೀಯ ಬಾಕ್ಸಿಂಗ್ ಫೆಡರೇಶನ್ ನಿಯಮಗಳು ನನಗೆ ಹಾಗೆ ಮಾಡಲು ಅನುಮತಿಸುವುದಿಲ್ಲ. ಪುರುಷ ಮತ್ತು ಮಹಿಳಾ ಬಾಕ್ಸರ್‌ಗಳಿಗೆ 40 ವರ್ಷ ವಯಸ್ಸಿನವರೆಗೆ ಮಾತ್ರ ಬಾಕ್ಸಿಂಗ್ ನಲ್ಲಿ ಸ್ಪರ್ಧಿಸಲು ಅವಕಾಶವಿದೆ, ಆದ್ದರಿಂದ ನಾನು ಈಗ ಯಾವುದೇ ದೊಡ್ಡ ಪಂದ್ಯಾವಳಿಯಲ್ಲಿ ಭಾಗವಹಿಸಲು ಸಾಧ್ಯವಿಲ್ಲ ಎಂದು ಹೇಳಿಕೊಂಡಿದ್ದಾರೆ.
ಮೇರಿ ಕೋಮ್ ಅವರಿಗೆ 41 ವರ್ಷ ತುಂಬಿದೆ. ಅವರು 2012 ರ ಲಂಡನ್ ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಕಂಚಿನ ಪದಕವನ್ನು ಗೆದ್ದರು. 6 ಬಾರಿ ವಿಶ್ವ ಚಾಂಪಿಯನ್ ಕೂಡ ಆಗಿದ್ದಾರೆ. ಈ ಸಾಧನೆ ಮಾಡಿದ ಏಕೈಕ ಮಹಿಳಾ ಬಾಕ್ಸರ್ ಮೇರಿ ಕೋಮ್. ಇದಲ್ಲದೆ 5 ಬಾರಿ ಏಷ್ಯನ್ ಚಾಂಪಿಯನ್‌ಶಿಪ್ ಗೆದ್ದ ಏಕೈಕ ಆಟಗಾರ್ತಿ ಕೂಡ ಆಗಿದ್ದಾರೆ.
ಇದನ್ನೂ ಓದಿ: Daily Horoscope: ಭಗವಂತನ ಅನುಗ್ರಹದಿಂದ ಆಪತ್ತುಗಳು ದೂರ, ಆರೋಗ್ಯ ಉತ್ತಮ