Advertisement

ಒಳನುಸುಳಲು ಯತ್ನ: ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಸೇನೆ

01:08 PM Jul 17, 2023 | Team Udayavani |

ಜಮ್ಮು/ಕಾಶ್ಮೀರ: ಜಮ್ಮು – ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಸೇನೆಯ ಕಣ್ತಪ್ಪಿಸಿ ಒಳನುಸುಳಲು ಯತ್ನಿಸಿದ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಯೋಧರು ಹತ್ಯೆಗೈದಿದ್ದಾರೆ.

Advertisement

ಸೇನೆ ಮತ್ತು ಜಮ್ಮು- ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆ ವೇಳೆ ಭಯೋತ್ಪಾದಕರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಈ ವೇಳೆ ಪ್ರತಿದಾಳಿ ನಡೆಸಿದ ಸೇನೆ ಇಬ್ಬರು ಉಗ್ರರನ್ನು ಸೆದೆಬಡಿದಿದೆ.

ಗಡಿಯಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದ್ದು ಈ ಕುರಿತು ಟ್ವೀಟ್ ಮಾಡಿದ ಕಾಶ್ಮೀರ ಪೊಲೀಸರು ಪೂಂಚ್ ಸೆಕ್ಟರ್‌ನಲ್ಲಿ ಆಪರೇಷನ್ ಬಹದ್ದೂರ್ ಎಂಬಲ್ಲಿ ಜುಲೈ 16 ರ ರಾತ್ರಿ ಕಾರ್ಯಾಚರಣೆ ನಡೆಸಿದ ವೇಳೆ ಗಡಿಯ ಒಳಗೆ ನುಸುಳಲು ಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ ಜೊತೆಗೆ ಅವರ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Tamil Nadu: ಉನ್ನತ ಶಿಕ್ಷಣ ಸಚಿವ ಪೊನ್ಮುಡಿ ನಿವಾಸದ ಮೇಲೆ ಇಡಿ ಅಧಿಕಾರಿಗಳ ದಾಳಿ

Advertisement

Udayavani is now on Telegram. Click here to join our channel and stay updated with the latest news.

Next