Advertisement

ವೈದ್ಯ ಆಯೋಗ ಖಂಡಿಸಿ ಇಂದು ದೇಶಾದ್ಯಂತ ಮುಷ್ಕರ

02:42 AM Jul 31, 2019 | mahesh |

ನವದೆಹಲಿ: ಭಾರತೀಯ ವೈದ್ಯಕೀಯ ಮಂಡಳಿ(ಐಎಂಸಿ) ಸ್ಥಾನದಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗವನ್ನು ತರುವಂಥ ರಾಷ್ಟ್ರೀಯ ವೈದ್ಯಕೀಯ ಆಯೋಗ ವಿಧೇಯಕಕ್ಕೆ ಲೋಕಸಭೆ ಅಂಗೀಕಾರ ನೀಡಿದ್ದನ್ನು ಖಂಡಿಸಿ ವೈದ್ಯರ ಸಂಘಟನೆ ಇಂಡಿಯನ್‌ ಮೆಡಿಕಲ್ ಅಸೋಸಿಯೇಶನ್‌ ಬುಧವಾರ ಮುಷ್ಕರಕ್ಕೆ ಕರೆ ನೀಡಿದೆ.

Advertisement

ಹೀಗಾಗಿ, ದೇಶಾದ್ಯಂತ ವೈದ್ಯ ಸೇವೆ ಅಸ್ತವ್ಯಸ್ತವಾಗುವ ಸಾಧ್ಯತೆ ಇದೆ. ಆದರೆ, ತುರ್ತು ಸೇವೆಗಳು, ಐಸಿಯು ಮತ್ತು ಇತರ ಸೇವೆಗಳನ್ನು ಮುಷ್ಕರ ವ್ಯಾಪ್ತಿಯಿಂದ ಹೊರಗಿಡಲಾಗಿದೆ. ಭಾರತೀಯ ವೈದ್ಯಕೀಯ ಮಂಡಳಿಯು ಸುಮಾರು 3 ಲಕ್ಷ ಸದಸ್ಯರನ್ನು ಹೊಂದಿದ್ದು, ಬುಧವಾರ ದೇಶಾದ್ಯಂತ ಉಪವಾಸ ಸತ್ಯಾಗ್ರಹ ಹಾಗೂ ಪ್ರತಿಭಟನೆಗಳನ್ನು ಹಮ್ಮಿಕೊಳ್ಳುವಂತೆ ಸದಸ್ಯರಿಗೆ ಕರೆ ನೀಡಿದೆ. ಜತೆಗೆ ವೈದ್ಯಕೀಯ ವಿದ್ಯಾರ್ಥಿಗಳಿಗೂ ತರಗತಿಗಳನ್ನು ಬಹಿಷ್ಕರಿಸಿ, ಮುಷ್ಕರದಲ್ಲಿ ಪಾಲ್ಗೊಳ್ಳುವಂತೆ ಸೂಚಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next