Advertisement

ಪಿಎಂ ಪರಿಹಾರ ನಿಧಿಗೆ 71 ಲಕ್ಷ  ರೂ. ದೇಣಿಗೆ ನೀಡಿದ ಭಾರತ ಒಲಿಂಪಿಕ್ಸ್ ಸಂಸ್ಥೆ

10:12 AM Apr 04, 2020 | keerthan |

ನವದೆಹಲಿ: ಕೋವಿಡ್-19 ವಿರುದ್ಧದ ಹೋರಾಟಕ್ಕಾಗಿ ಭಾರತೀಯ ಒಲಿಂಪಿಕ್ಸ್ ಸಂಸ್ಥೆ (ಐಒಎ) ಒಟ್ಟು 71 ಲಕ್ಷ ರೂ. ಸಂಗ್ರಹಿಸಿ ಸರ್ಕಾರಕ್ಕೆ ನೀಡಿದೆ.

Advertisement

ವಿವಿಧ ರಾಜ್ಯಗಳ ಸಂಸ್ಥೆ ಹಾಗೂ ರಾಷ್ಟ್ರೀಯ ಕ್ರೀಡಾ ಒಕ್ಕೂಟ (ಎನ್‌ಎಸ್‌ ಎಫ್) ಮೂಲಕ ಹಣವನ್ನು ಸಂಗ್ರಹಿಸಲಾಗಿದೆ ಎಂದು ಭಾರತೀಯ ಒಲಿಂಪಿಕ್ಸ್‌ ಸಂಸ್ಥೆ ತಿಳಿಸಿದೆ.

“ಕೋವಿಡ್-19 ವಿರುದ್ಧ ಇಡೀ ದೇಶವೇ ಹೋರಾಡುತ್ತಿರುವ ಸಂದರ್ಭದಲ್ಲಿ ವಿವಿಧ ರಾಜ್ಯಗಳ ಸಂಸ್ಥೆಯಿಂದ ನಾವೆಲ್ಲ ಒಗ್ಗಟಾಗಿ ಹಣವನ್ನು ಕಲೆ ಹಾಕಿದ್ದೇವೆ. ಅದನ್ನು ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ನೀಡಲಾಗುತ್ತದೆ’ ಎಂದು ಪ್ರಧಾನ ಕಾರ್ಯದರ್ಶಿ ರಾಜೀವ್‌ ಮೆಹ್ತಾ ತಿಳಿಸಿದ್ದಾರೆ.

ಈ ವರ್ಷ ಜಪಾನಿನ ಟೋಕಿಯೋದಲ್ಲಿ ನಡೆಯಬೇಕಿದ್ದ ಒಲಿಂಪಿಕ್ಸ್ ಕೋವಿಡ್-19 ಸೋಂಕಿನ ಕಾರಣ ಮುಂದಿನ ವರ್ಷಕ್ಕೆ ಮುಂದೂಡಿಕೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next