Advertisement
ಮೇ ತಿಂಗಳಲ್ಲಿ ಭಾರತ ಥಾಮಸ್ ಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪ್ರಣಯ್ ಪುರುಷರ ಸಿಂಗಲ್ಸ್ ರ್‍ಯಾಂಕಿಂಗ್‌ನಲ್ಲಿ ಎರಡು ಸ್ಥಾನ ಮೇಲಕ್ಕೇರಿ 19ನೇ ಸ್ಥಾನ ಪಡೆದರು. 2018ರಲ್ಲಿ ತನ್ನ ಜೀವನಶ್ರೇಷ್ಠ ಎಂಟನೇ ರ್‍ಯಾಂಕ್ ಪಡೆದಿದ್ದರು.
ವನಿತೆಯರ ವಿಭಾಗದಲ್ಲಿ ಪಿ.ವಿ. ಸಿಂಧು ಏಳನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಸೈನಾ ನೆಹ್ವಾಲ್ 24ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್‌ಸಾಯಿರಾಜ್ ರಂಕಿರೆಡ್ಡಿ ಡಬಲ್ಸ್ ರ್‍ಯಾಂಕಿಂಗ್‌ನಲ್ಲಿ ಎಂಟನೇ ಸ್ಥಾನ ಉಳಿಸಿಕೊಂಡಿದ್ದಾರೆ.