ಹೂಸ್ಟನ್: 23 ವರ್ಷದ ಭಾರತೀಯ ವಿದ್ಯಾರ್ಥಿನಿಯೊಬ್ಬಳು ಕಳೆದ ವಾರದಿಂದ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದು, ಆಕೆಯ ಪತ್ತೆಗಾಗಿ ಪೊಲೀಸರು ಸಾರ್ವಜನಿಕರ ಕೋರಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:Kolhapur: ಜೈಲಿನೊಳಗೆ ಮುಂಬೈ ಸರಣಿ ಬಾಂಬ್ ಸ್ಫೋಟದ ಆರೋಪಿ ಖಾನ್ ಹತ್ಯೆ
ಇತ್ತೀಚೆಗೆ ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ಗುರಿಯಾಗಿರಿಸಿಕೊಂಡು ಹತ್ಯೆಗೈಯ್ಯುವ ಹಾಗೂ ದಾಳಿ ನಡೆಸುವ ಪ್ರಕರಣ ಹೆಚ್ಚಳವಾಗುತ್ತಿರುವುದು ಕಳವಳಕಾರಿಯಾಗಿದೆ ಎಂದು ವರದಿ ಹೇಳಿದೆ.
ಕ್ಯಾಲಿಫೋರ್ನಿಯಾ ಸ್ಟೇಟ್ ಯೂನಿರ್ವಸಿಟಿಯ ಸ್ಯಾನ್ ಬರ್ನಾಡಿನೊ(CSUSB) ವಿದ್ಯಾರ್ಥಿನಿ ನಿತೀಶಾ ಕಂದುಲಾ ಮೇ 28ರಂದು ನಾಪತ್ತೆಯಾಗಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಲಾಸ್ ಏಂಜಲೀಸ್ ನಲ್ಲಿ ನಿತೀಶಾ ಕೊನೆಯದಾಗಿ ಕಾಣಿಸಿಕೊಂಡಿದ್ದು, ಆ ನಂತರ ಆಕೆ ನಾಪತ್ತೆಯಾಗಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಜಾನ್ ಗ್ಯುಟೇರೆಜ್ ಎಕ್ಸ್ ನಲ್ಲಿ ತಿಳಿಸಿದ್ದಾರೆ.
ಕಂದುಲಾ (23ವರ್ಷ) ಐದು ಅಡಿ 6 ಇಂಚು ಎತ್ತರವಿದ್ದು, ಸುಮಾರು 72 ಕೆಜಿ ತೂಕ ಹೊಂದಿದ್ದು, ಈಕೆಯನ್ನು ಗುರುತಿಸಿದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡುವಂತೆ ಪ್ರಕಟನೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.