Advertisement

ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿ ಕೊಲೆ : ಕೊರಿಯಾ ಮೂಲದ ವಿದ್ಯಾರ್ಥಿಯ ಬಂಧನ

07:47 PM Oct 06, 2022 | Team Udayavani |

ವಾಷಿಂಗ್ಟನ್‌: ಅಮೆರಿಕದ ಇಂಡಿಯಾನಾ ಪೊಲೀಸ್‌ ಪ್ರಾಂತ್ಯದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ರೂಮ್‌ಮೇಟ್‌ ಕೊರಿಯಾ ಮೂಲದ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ಪಡ್ನೂ ವಿಶ್ವವಿದ್ಯಾಲಯದಲ್ಲಿ ಡೇಟಾ ಸೈನ್ಸ್‌ ವಿಭಾಗದಲ್ಲಿ ಅಧ್ಯಯನ ನಡೆಸುತ್ತಿದ್ದ ಭಾರತೀಯ ಮೂಲದ ವರುಣ್‌ ಮನೀಶ್‌ ಚೆಡ್ಡಾ ಮೃತ ದುರ್ದೈವಿ. ಪಡ್ನೂ ವಿಶ್ವವಿದ್ಯಾಲಯ ಕ್ಯಾಂಪಸ್‌ನ ಮ್ಯಾಕ್‌ಕಚ್ಚಿಯಾನ್‌ ಹಾಲ್‌ನಲ್ಲಿ ಮೃತದೇಹ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಪ್ರಾಥಮಿಕ ತನಿಖೆ ಪ್ರಕಾರ, ಚೆಡ್ಡಾ ಅವರನ್ನು ಹಲವು ಬಾರಿ ಇರಿದು ಕೊಲೆ ಮಾಡಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ : ಡಿಸೆಂಬರ್‌ 15 ರ ವೇಳೆಗೆ ರಾಜ್ಯದಲ್ಲಿ 438 ʼನಮ್ಮ ಕ್ಲಿನಿಕ್‌ʼ ಕಾರ್ಯಾರಂಭ: ಡಾ.ಕೆ.ಸುಧಾಕರ್‌

Advertisement

Udayavani is now on Telegram. Click here to join our channel and stay updated with the latest news.

Next