Advertisement

ಕೀವ್ ನಲ್ಲಿ ಭಾರತೀಯ ವಿದ್ಯಾರ್ಥಿಯ ಮೇಲೆ ಗುಂಡಿನ ದಾಳಿ: ಆಸ್ಪತ್ರೆಗೆ ದಾಖಲು!

10:14 AM Mar 04, 2022 | Team Udayavani |

ಕೀವ್: ರಷ್ಯಾದ ದಾಳಿಯಿಂದ ನಲುಗಿರುವ ಉಕ್ರೇನ್ ರಾಜಧಾನಿ ಕೀವ್ ನಲ್ಲಿ ಭಾರತೀಯ ವಿದ್ಯಾರ್ಥಿಯ ಮೇಲೆ ದಾಳಿ ನಡೆಸಲಾಗಿದೆ. ಗುಂಡಿನ ದಾಳಿಗೊಳಗಾಗಿರುವ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕೇಂದ್ರ ಸಚಿವ ವಿ.ಕೆ ಸಿಂಗ್ ಹೇಳಿದ್ದಾರೆ.

Advertisement

ಕೀವ್ ನ ವಿದ್ಯಾರ್ಥಿಯೊಬ್ಬನಿಗೆ ಗುಂಡು ಹಾರಿಸಲಾಗಿದೆ ಎಂದು ವರದಿಯಾಗಿದೆ ತಕ್ಷಣ ಅವರನ್ನು ಕೈವ್‌ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ನಾಗರಿಕ ವಿಮಾನಯಾನ ರಾಜ್ಯ ಸಚಿವ ಜನರಲ್ ವಿಕೆ ಸಿಂಗ್ ತಿಳಿಸಿದ್ದಾರೆ.

ಯುದ್ಧ ಪೀಡಿತ ಉಕ್ರೇನ್ ನಿಂದ ಕೂಡಲೇ ಸ್ಥಳಾಂತರವಾಗುವಂತೆ ವಿದ್ಯಾರ್ಥಿಗಳಿಗೆ ಈಗಾಗಲೇ ಭಾರತೀಯ ರಾಯಭಾರ ಕಚೇರಿ ಸೂಚನೆ ನೀಡಿದೆ ಎಂದು ಕೇಂದ್ರ ಸಚಿವರು ಒತ್ತಿ ಹೇಳಿದರು. ಯುದ್ಧದ ಸಂದರ್ಭದಲ್ಲಿ, ಗನ್ ಬುಲೆಟ್ ಯಾರ ಧರ್ಮ ಮತ್ತು ರಾಷ್ಟ್ರೀಯತೆಯನ್ನು ನೋಡುವುದಿಲ್ಲ ಎಂದು ವಿ.ಕೆ ಸಿಂಗ್ ಹೇಳಿದರು.

ಉಕ್ರೇನ್‌ ನಲ್ಲಿನ ಸ್ಥಳಾಂತರಿಸುವ ಕಾರ್ಯವನ್ನು ಮೇಲ್ವಿಚಾರಣೆ ಮಾಡಲು ಈ ವಾರದ ಆರಂಭದಲ್ಲಿ ಪೂರ್ವ ಯುರೋಪ್‌ಗೆ ಪ್ರಯಾಣಿಸಿದ ನಾಲ್ವರು ಕೇಂದ್ರ ಸಚಿವರಲ್ಲಿ ವಿಕೆ ಸಿಂಗ್ ಕೂಡ ಸೇರಿದ್ದಾರೆ. ಹರ್ದೀಪ್ ಸಿಂಗ್ ಪುರಿ, ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಕಿರಣ್ ರಿಜಿಜು ಇತರ ಮೂವರು.

ಇದನ್ನೂ ಓದಿ:ಉಕ್ರೇನ್ ಸಂಕಷ್ಟ: ಭಾರತದ ವಿಮಾನದ ನಿರೀಕ್ಷೆಯಲ್ಲಿ ಉಜಿರೆ ವಿದ್ಯಾರ್ಥಿನಿ

Advertisement

ಕರ್ನಾಟಕದ ಹಾವೇರಿ ಜಿಲ್ಲೆಯ ವೈದ್ಯಕೀಯ ವಿದ್ಯಾರ್ಥಿ ನವೀನ್ ಮಂಗಳವಾರ ಪೂರ್ವ ಉಕ್ರೇನ್‌ನ ಖಾರ್ಕಿವ್ ನಗರದಲ್ಲಿ ತೀವ್ರವಾದ ಶೆಲ್ ದಾಳಿಯ ಪರಿಣಾಮ ಸಾವನ್ನಪ್ಪಿದರು. ಬಲಿಯಾದ ನವೀನ್ ಶೇಖರಪ್ಪ ಜ್ಞಾನಗೌಡರ್ ಖಾರ್ಕಿವ್ ರಾಷ್ಟ್ರೀಯ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ನಾಲ್ಕನೇ ವರ್ಷದ ವೈದ್ಯಕೀಯ ವಿದ್ಯಾರ್ಥಿಯಾಗಿದ್ದರು.

ಈ ಘಟನೆಯ ನಂತರ, ಖಾರ್ಕಿವ್ ಮತ್ತು ಇತರ ಯುದ್ಧ ವಲಯಗಳಲ್ಲಿ ಇನ್ನೂ ಇರುವ ಭಾರತೀಯ ಪ್ರಜೆಗಳಿಗೆ “ತುರ್ತು ಸುರಕ್ಷಿತ ಮಾರ್ಗ” ವನ್ನು ಖಚಿತಪಡಿಸಿಕೊಳ್ಳಲು ಭಾರತವು ರಷ್ಯಾ ಮತ್ತು ಉಕ್ರೇನ್ ಎರಡೂ ರಾಯಭಾರಿಗಳನ್ನು ಕೇಳಿಕೊಂಡಿದೆ. ಭಾರತೀಯ ರಾಯಭಾರ ಕಚೇರಿಯು ಗುರುವಾರ ನಾಗರಿಕರಿಗೆ ಖಾರ್ಕಿವ್ ತೊರೆದು ಮೂರು ಸುರಕ್ಷಿತ ವಲಯಗಳಿಗೆ ತೆರಳುವಂತೆ ತುರ್ತು ನಿರ್ದೇಶನ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next