Advertisement
ಮುಂಬಯಿಯ ಹೊಟೇಲ್‌ನಲ್ಲಿ 14 ದಿನಗಳ ಕ್ವಾರಂಟೈನ್ ಮುಗಿದ ಬಳಿಕ ತಂಡ ಜೂನ್ 2ಕ್ಕೆ ಇಂಗ್ಲೆಂಡ್‌ಗೆ ತೆರಳಲಿದೆ. ಬಳಿಕ ಭಾರತೀಯ ಆಟಗಾರರು ಸೌತಾಂಪ್ಟನ್‌ನಲ್ಲಿ 10 ದಿನಗಳ ಕ್ವಾರಂಟೈನ್‌ಗೆ ಒಳಗಾಗಬೇಕಿದೆ. ಇದು ಜೂನ್ 12ಕ್ಕೆ ಕೊನೆಗೊಳ್ಳಲಿದೆ. ಈ ಮಧ್ಯೆ ತಂಡವನ್ನು ಸಣ್ಣ ವಿಭಾಗಗಳಾಗಿ ವಿಂಗಡಿಸಿ ಅಭ್ಯಾಸ ನಡೆಸಲು ಅನುಮತಿ ನೀಡಲಾಗಿದೆ.
ಕೊರೊನಾ ಸೋಂಕು ಹಾವಳಿಯಿಂದಾಗಿ ಇದೇ ಮೊದಲ ಬಾರಿಗೆ ಪುರುಷರ ಮತ್ತು ಮಹಿಳಾ ಕ್ರಿಕೆಟ್ ತಂಡಗಳು ಜತೆಯಾಗಿ ಇಂಗ್ಲೆಂಡ್‌ಗೆ ಪ್ರಯಾಣಿಸಲಿವೆ. ನ್ಯೂಜಿಲ್ಯಾಂಡ್ ವಿರುದ್ಧ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಮತ್ತು ಇಂಗ್ಲೆಂಡ್ ವಿರುದ್ಧ ಆಡಲಾಗುವ ಟೆಸ್ಟ್ ಸರಣಿಗಾಗಿ ವಿರಾಟ್ ಪಡೆ ಪ್ರಯಾಣಿಸಿದರೆ, ಮಹಿಳಾ ತಂಡ ಇಂಗ್ಲೆಂಡ್‌ನಲ್ಲಿ ಸೀಮಿತ ಓವರ್‌ಗಳ ಸರಣಿ ಮತ್ತು ಏಕೈಕ ಟೆಸ್ಟ್ ಪಂದ್ಯದಲ್ಲಿ ಪಾಲ್ಗೊಳ್ಳಲು ಲಂಡನ್‌ಗೆ ತೆರಳಲಿದೆ.
Related Articles
Advertisement
ವನಿತಾ ಕ್ರಿಕೆಟ್ ತಂಡದ ಆಸ್ಟ್ರೇಲಿಯ ಪ್ರವಾಸಇಂಗ್ಲೆಂಡ್ ಪ್ರವಾಸ ಮುಗಿಸಿದ ಬಳಿಕ ಭಾರತದ ವನಿತಾ ಕ್ರಿಕೆಟ್ ತಂಡ ಆಸ್ಟ್ರೇಲಿಯಕ್ಕೆ ತೆರಳಲಿದೆ ಎಂದು ಬಿಸಿಸಿಐ ಮೂಲವೊಂದು ಪಿಟಿಐಗೆ ತಿಳಿಸಿದೆ. ಇದೊಂದು ಪೂರ್ಣ ಪ್ರಮಾಣದ ಪ್ರವಾಸವಾಗಿದ್ದು, ಟೆಸ್ಟ್, ಏಕದಿನ ಹಾಗೂ ಟಿ20 ಪಂದ್ಯಗಳನ್ನು ಆಡಲಾಗುವುದು. ಆಗ ಆಸ್ಟ್ರೇಲಿಯ ವಿರುದ್ಧ ಭಾರತ 2006ರ ಬಳಿಕ ಮೊದಲ ಸಲ ಟೆಸ್ಟ್ ಪಂದ್ಯವೊಂದನ್ನು ಆಡಿದಂತಾಗುತ್ತದೆ.
ಸೆಪ್ಟಂಬರ್ ನಡು ಭಾಗದಲ್ಲಿ ಈ ಪ್ರವಾಸ ಕೈಗೊಳ್ಳಲಾಗುವುದು ಎಂದು ತಿಳಿದು ಬಂದಿದೆ.