Advertisement

ರಾಮಮಂದಿರ ನಿರ್ಮಾಣವಾಗಬೇಕೆಂಬ ಭಾರತೀಯರ ಶತಮಾನಗಳ ಕನಸು ಇಂದು ನನಸು: H.D ಕುಮಾರಸ್ವಾಮಿ

12:20 PM Aug 05, 2020 | Mithun PG |

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂಬ ಭಾರತೀಯರ ಶತಮಾನಗಳ ಕನಸು ನನಸಾಗಲು ಇಂದು ಕಾಲ ಕೂಡಿಬಂದಿದೆ. ಇದು ನಮ್ಮೆಲ್ಲರ ಸಂತೋಷದ ಘಳಿಗೆ. ಅದಕ್ಕೂ ಮಿಗಿಲಾಗಿ ಇದು ಭಾವನಾತ್ಮಕ ಸನ್ನಿವೇಶ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

Advertisement

ಎಲ್ಲರ ಹೃನ್ಮನಗಳಲ್ಲಿ ನೆಲೆಸಿರುವ ರಾಮನ ಎಲ್ಲ ತತ್ವಾದರ್ಶಗಳಿಗೆ ಮಂದಿರವು ಸಂಕೇತವಾಗಲಿ. ಭಾರತದ ಹೆಗ್ಗುರುತಾಗಲಿ. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ರಾಮನ ಜನಪರ ಕಾಳಜಿ ಹಾಗೂ ಹೃದಯ ವೈಶಾಲ್ಯ ಈಗಿನ ನಮ್ಮ ಜನಪ್ರತಿನಿಧಿಗಳಿಗೆ ಮೇರು ಪ್ರೇರಣೆಯಾಗಲಿ.

ಅಯೋಧ್ಯೆಯಲ್ಲಿ ಮಂದಿರವೊಂದನ್ನು ಕಟ್ಟಿಕೊಳ್ಳಲು ಭಾರತೀಯರಾದ ನಾವು ಕಾನೂನಾತ್ಮಕ ಹೋರಾಟ ನಡೆಸಬೇಕಾಗಿದ್ದು, ಅದು ಕೆಲವರಿಗೆ ರಾಜಕೀಯ ದಾಳವಾಗಿದ್ದು, ಅಧಿಕಾರಕ್ಕೇರಲು ಏಣಿಯಾಗಿದ್ದು ನಮ್ಮ ಕೆಟ್ಟ ಘಳಿಗೆಗಳಲ್ಲಿ ಒಂದು. ರಾಮನ ಆದರ್ಶಗಳಿಗೆ ಈ ದೇಗುಲವು ಸಾಮರಸ್ಯದ ಸಂಕೇತವಾಗಿ ಉಳಿಯಲಿ‌. ಈ ಮೂಲಕ ಸ್ವಾರ್ಥ ನಶಿಸಲಿ. ಎಲ್ಲರಿಗೂ ಶುಭ ತರಲಿ.

ರಾಮಮಂದಿರ ನಿರ್ಮಾಣ ಸಾಂಸ್ಕೃತಿಕ ಪರಂಪರೆಯ ಬೆಸುಗೆ ಹಾಗೂ ರಾಷ್ಟ್ರೀಯ ಏಕತೆಯ ಪ್ರತಿಬಿಂಬವಾಗಲಿ ಎಂಬ ಆಶಯ ನನ್ನದು ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next