Advertisement

ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ಮೇ7ರಿಂದ ಹಂತ, ಹಂತವಾಗಿ ಕರೆತರಲಾಗುವುದು: ಕೇಂದ್ರ

08:15 PM May 04, 2020 | Team Udayavani |

ನವದೆಹಲಿ:ಕೋವಿಡ್ 19 ವೈರಸ್ ಹಿನ್ನಲೆಯಲ್ಲಿ ವಿದೇಶದಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ಹಂತ, ಹಂತವಾಗಿ ಮೇ 7ರಿಂದ ಸ್ವದೇಶಕ್ಕೆ ಕರೆತರಲು ಆರಂಭಿಸಲಾಗುವುದು ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ.

Advertisement

ವಿದೇಶದಲ್ಲಿ ಸಿಕ್ಕಿಹಾಕಿಕೊಂಡಿರುವ ಭಾರತೀಯರನ್ನು ವಿಮಾನ ಮತ್ತು ನೌಕದಳದ ಹಡಗುಗಳಲ್ಲಿ ಕರೆತರಲು ಸಿದ್ಧತೆ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಸೂಕ್ತ ಕಾರ್ಯಾಚರಣೆಯ ಪ್ರೊಟೊಕಾಲ್ ತಯಾರಿಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಭಾರತದಲ್ಲಿ ಮೂರನೇ ಹಂತದ ಲಾಕ್ ಡೌನ್ ಜಾರಿಯಾದ ಮೇ 4ರಂದೇ ಕೇಂದ್ರ ಸರ್ಕಾರ ಈ ನಿರ್ಧಾರ ಘೋಷಿಸಿದ್ದು, ದೇಶದಲ್ಲಿ ಈವರೆಗೆ ಒಟ್ಟು ಕೋವಿಡ್ 19 ವೈರಸ್ ಗೆ ಸಂಬಂಧಿಸಿದ ಪ್ರಕರಣ 43 ಸಾವಿರಕ್ಕೆ ಸಮೀಪಿಸಿದೆ.

ವಿದೇಶದಲ್ಲಿ ಸಿಲುಕಿರುವ ಭಾರತೀಯರ ಪಟ್ಟಿಯನ್ನು ಭಾರತೀಯ ರಾಯಭಾರಿ ಕಚೇರಿ ಮತ್ತು ಹೈಕಮೀಷನ್ ಸಿದ್ದಪಡಿಸುತ್ತಿದೆ. ಪಾವತಿ ಆಧಾರದ ಮೇಲೆ ಈ ಸೌಲಭ್ಯ ಲಭ್ಯವಾಗಲಿದೆ. ನಾನ್ ಶೆಡ್ಯೂಲ್ ವಾಣಿಜ್ಯ ವಿಮಾನಗಳಲ್ಲಿ ಪ್ರಯಾಣಿಸಲು ಅನುಕೂಲ ಮಾಡಿಕೊಡಲಾಗುವುದು. ಮೇ 7ರಂದು ಮೊದಲ ಹಂತ ಆರಂಭಗೊಳ್ಳಲಿದೆ ಎಂದು ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next