ನವದೆಹಲಿ: ಕಳೆದ 24ಗಂಟೆಗಳಲ್ಲಿ 43,509 ಹೊಸ ಕೋವಿಡ್ 19 ಪ್ರಕರಣ ಪತ್ತೆಯಾಗಿದ್ದು, ಒಟ್ಟು 38,465 ಮಂದಿ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಜುಲೈ 29) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಬ್ಯಾಕ್ ಟು ಬ್ಯಾಕ್ ಧನಂಜಯ್ ಸಿನ್ಮಾ! ಈ ವರ್ಷ ಎಂಟಕ್ಕೂ ಹೆಚ್ಚು ಚಿತ್ರ ಬಿಡುಗಡೆ ಸಾಧ್ಯತೆ
ದೇಶದಲ್ಲಿ ಚೇತರಿಕೆ ಪ್ರಮಾಣ 97.38ರಷ್ಟಿದೆ. ಅಲ್ಲದೇ ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 4,03,840ಕ್ಕೆ ಏರಿಕೆಯಾಗಿದೆ. ಕಳೆದ 24ಗಂಟೆಗಳಲ್ಲಿ ಕೋವಿಡ್ ನಿಂದ 640 ಜನರು ಸಾವನ್ನಪ್ಪಿದ್ದು, ಇದರೊಂದಿಗೆ ದೇಶದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,22,662ಕ್ಕೆ ಹೆಚ್ಚಳವಾಗಿದೆ ಎಂದು ಅಂಕಿಅಂಶದಲ್ಲಿ ವಿವರಿಸಲಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಭಾರತದಲ್ಲಿ ಕೇರಳ ರಾಜ್ಯವೊಂದರಲ್ಲಿಯೇ ಬರೋಬ್ಬರಿ 22,056 ಪ್ರಕರಣಗಳು ಪತ್ತೆಯಾಗಿದ್ದು, ಮಹಾರಾಷ್ಟ್ರದಲ್ಲಿ 6,857 ಕೋವಿಡ್ ಪ್ರಕರಣ ವರದಿಯಾಗಿದೆ ಎಂದು ತಿಳಿಸಿದೆ.
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಅಂಕಿಅಂಶದ ಪ್ರಕಾರ, ಜುಲೈ 28ರವರೆಗೆ 46,26,29,773 ಸ್ಯಾಂಪಲ್ಸ್ ಪರೀಕ್ಷೆಗೊಳಪಡಿಸಲಾಗಿದೆ. ಬುಧವಾರ 17,28,795 ಸ್ಯಾಂಪಲ್ಸ್ ಪರೀಕ್ಷಿಸಲಾಗಿದೆ ಎಂದು ಹೇಳಿದೆ.