ನವದೆಹಲಿ: ಭಾರತದಲ್ಲಿ ಕಳೆದ ಎರಡು ದಿನಗಳಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, 24ಗಂಟೆಗಳಲ್ಲಿ 32,937 ಹೊಸ ಕೋವಿಡ್ ಪ್ರಕರಣ ವರದಿಯಾಗಿದೆ ಎಂದು ಸೋಮವಾರ (ಆಗಸ್ಟ್ 16) ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿ ಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಲಾರ್ಡ್ಸ್ ಪಿಚ್ ನಿನ್ನ ಮನೆಯ ಹಿತ್ತಲಲ್ಲ: ಆ್ಯಂಡರ್ಸನ್ ವಿರುದ್ಧ ರೇಗಿದ ವಿರಾಟ್
ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3,81,947ಕ್ಕೆ ಇಳಿಕೆಯಾಗಿದೆ. ಭಾನುವಾರ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3,85,336 ಲಕ್ಷದಷ್ಟಿತ್ತು. ಕಳೆದ 2020ರ ಮಾರ್ಚ್ ನಂತರ ವರದಿಯಾದ ಅತಿ ಕಡಿಮೆ ಸಕ್ರಿಯ ಪ್ರಕರಣಗಳ ಸಂಖ್ಯೆ ಇದಾಗಿದೆ ಎಂದು ಹೇಳಿದೆ.
ಕಳೆದ 24ಗಂಟೆಗಳಲ್ಲಿ ಕೋವಿಡ್ ನಿಂದ 417 ಮಂದಿ ಸಾವನ್ನಪ್ಪಿದ್ದು, ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,31,642ಕ್ಕೆ ಇಳಿಕೆಯಾಗಿದೆ. ಒಟ್ಟು ದೇಶದಲ್ಲಿ ಕೋವಿಡ್ ಸೋಂಕಿನಿಂದ 3.14 ಕೋಟಿ ಮಂದಿ ಗುಣಮುಖರಾಗಿದ್ದಾರೆ.
ದೇಶದಲ್ಲಿ ಕೋವಿಡ್ 19 ಚೇತರಿಕೆ ಪ್ರಮಾಣ ಶೇ. 97.48ರಷ್ಟಿದೆ. ಭಾರತ ಕೋವಿಡ್ ಸೋಂಕಿನ ವಿರುದ್ಧ ಪ್ರಬಲವಾಗಿ ಮತ್ತು ಸಮರ್ಥವಾಗಿ ಹೋರಾಟ ನಡೆಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ 75ನೇ ವರ್ಷದ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡುತ್ತ ತಿಳಿಸಿದ್ದರು.