ವಾಷಿಂಗ್ಟನ್ ಡಿಸಿ: ಭಾರತ, ಚೀನಾ, ರಷ್ಯಾ ದೇಶಗಳನ್ನು ಗಮನಿಸಿ, ಅಲ್ಲಿನ ಗಾಳಿ ಕಲುಷಿತವಾಗಿದೆ. ಆ ದೇಶಗಳ ವಾಯು ಮಾಲಿನ್ಯಕ್ಕೆ ಹೋಲಿಸಿದರೆ ಅಮೆರಿಕದಲ್ಲಿ ಗಾಳಿ ಶುದ್ಧವಾಗಿದೆ, ಸ್ವಚ್ಛವಾದ ನೀರಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಅಧ್ಯಕ್ಷೀಯ ಚುನಾವಣೆಗೆ ಭರ್ಜರಿ ಪ್ರಚಾರದಲ್ಲಿರುವ ಟ್ರಂಪ್, ಹವಾಮಾನ ಬದಲಾವಣೆಯ ಬಗ್ಗೆ ತಮ್ಮ ನಿಲುವನ್ನು ಸಮರ್ಥಿಸಿಕೊಳ್ಳುತ್ತಾ, ಭಾರತವನ್ನು ಟೀಕೆ ಮಾಡಿದ್ದಾರೆ.
ಭಾರತ- ಅಮೆರಿಕ ಸಹಭಾಗಿತ್ವವನ್ನು ಬೆಳೆಸುವ ಉದ್ದೇಶದಿಂದ ಅಮೆರಕ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೋ ಮತ್ತು ರಕ್ಷಣಾ ಕಾರ್ಯದರ್ಶಿ ಮಾರ್ಕ್ ಎಸ್ಟರ್ ಕೆಲವೇ ದಿನಗಳಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಇದಕ್ಕೂ ಮೊದಲು ಟ್ರಂಪ್ ಈ ಹೇಳಿಕೆ ನೀಡಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ಇದನ್ನೂ ಓದಿ:ಖರೀದಿದಾರರ ಕಣ್ಣಲ್ಲಿ ನೀರು!: ಮುಂಬೈ, ಪೂನಾದಲ್ಲಿ ಗಗನಕ್ಕೇರಿದ ಈರುಳ್ಳಿ ಬೆಲೆ…
ಜೋ ಬಿಡೆನ್ ರ ಹವಾಮಾನ ಯೋಜನೆ ಟೆಕ್ಸಾಸ್ ಮತ್ತು ಒಕ್ಲಹೋಮಾದಂತಹ ತೈಲ ರಾಜ್ಯಗಳಿಗೆ “ಆರ್ಥಿಕ ವಿಪತ್ತು” ಎಂದು ಟ್ರಂಪ್ ಆರೋಪಿಸಿದ್ದಾರೆ ಎಂದು ಎಎಫ್‌ಪಿ ವರದಿ ಮಾಡಿದೆ.
ಅಮೆರಿಕದಲ್ಲಿ ಕಪ್ಪು ಜನಾಂಗದವರಿಗೆ ಅಬ್ರಹಾಂ ಲಿಂಕನ್ ಹೊರತುಪಡಿಸಿ ಬೇರೆ ಯಾವ ಅಧ್ಯಕ್ಷರೂ ಮಾಡದಷ್ಟು ಕೆಲಸವನ್ನು ನಾನು ಮಾಡಿದ್ದೇನೆ. ಅವರಿಗಾಗಿ ಹಲವಾರು ಯೋಜನೆಗಳನ್ನು ಘೋಷಿಸಿದ್ದೇನೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದರು. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಜೋ ಬಿಡೆನ್ ಅಮೆರಿಕದ ಇದುವರೆಗಿನ ಎಲ್ಲ ಅಧ್ಯಕ್ಷರಿಗಿಂತಲೂ ಅಬ್ರಾಹಾಂ ಲಿಂಕನ್ ಅತಿ ಹೆಚ್ಚು ವರ್ಣಭೇದವಿದ್ದ ಅಧ್ಯಕ್ಷರಾಗಿದ್ದರು. ಅವರನ್ನು ಟ್ರಂಪ್ ವಿನಾಕಾರಣ ಹೊಗಳುತ್ತಿದ್ದಾರೆ ಎಂದಿದ್ದಾರೆ.