ನವದೆಹಲಿ: ಅಮೆರಿಕಕ್ಕೆ ಭಾರತದ ರಾಯಭಾರಿಯಾಗಿರುವ ತರಂಜಿತ್ ಸಿಂಗ್ ಸಂಧು ಅವರ ಅಧಿಕಾರವಧಿಯನ್ನು ಒಂದು ವರ್ಷ ವಿಸ್ತರಿಸಿ ಭಾರತ ಸರ್ಕಾರ ಆದೇಶ ಹೊರಡಿಸಿದೆ.
Advertisement
ಐಎಫ್ಎಸ್ ಅಧಿಕಾರಿಯಾಗಿರುವ ತರಂಜಿತ್ ಸಿಂಗ್ ಸಂಧು ಅವರನ್ನು ಅಮೆರಿಕಕ್ಕೆ ಭಾರತದ ರಾಯಭಾರಿಯಾಗಿ ಒಂದು ವರ್ಷದ ಮಟ್ಟಿಗೆ ವಿಸ್ತರಿಸಲಾಗಿದೆ.
2023ರ ಫೆ.1ರಿಂದ 2024ರ ಜ.31ರವರೆಗೆ ಅಥವಾ ಮುಂದಿನ ಆದೇಶದವರೆಗೆ ಅವರ ಅಧಿಕಾರವಧಿ ಮುಂದುವರಿಯಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಹಿರಿಯ ಐಎಫ್ಎಸ್ ಅಧಿಕಾರಿಯಾಗಿರುವ ಸಂಧು ಅವರು ಈಗಾಗಲೇ ಮೂರು ಅವಧಿಗೆ ಅಮೆರಿಕ ರಾಯಭಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.
Related Articles
Advertisement