ನವದೆಹಲಿ:ಭಾರತದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 63,12,484ಕ್ಕೆ ಏರಿಕೆಯಾಗಿದ್ದು, ಕಳೆದ 24ಗಂಟೆಯಲ್ಲಿ 86,821 ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳವಾಗಿದ್ದು, 1,181 ಜನರು ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಬಿಡುಗಡೆ ಮಾಡಿರುವ ಅಂಕಿ-ಅಂಶದಲ್ಲಿ ತಿಳಿಸಿದೆ.
ಒಟ್ಟು ಪ್ರಕರಣಗಳಲ್ಲಿ ಸದ್ಯ 9,40,705 ಸಕ್ರಿಯ ಕೇಸ್ ಗಳಿವೆ. ಇದರಲ್ಲಿ 52,73,201 ಮಂದಿ ಕೋವಿಡ್ ಸೋಂಕಿತರು ಗುಣಮುಖರಾಗಿದ್ದಾರೆ. 98,678 ಜನರು ಸಾವನ್ನಪ್ಪಿದ್ದಾರೆ ಎಂದು ವಿವರಿಸಿದೆ. ದಿನದಿಂದ ದಿನಕ್ಕೆ ಭಾರತದಲ್ಲಿ ಗುಣಮುಖರಾಗುತ್ತಿರುವವರ ಪ್ರಮಾಣ ಹೆಚ್ಚಳವಾಗುತ್ತಿದೆ ಎಂದು ತಿಳಿಸಿದೆ.
ದೇಶದಲ್ಲಿ ಶೇ.83.53ರಷ್ಟು ಚೇತರಿಕೆ ಪ್ರಮಾಣ ಕಂಡು ಬಂದಿದೆ. ಸಾವಿನ ಸಂಖ್ಯೆಯೂ ಶೇ.1.56ರಷ್ಟು ಕಡಿಮೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಂಕಿಅಂಶ ತಿಳಿಸಿದೆ.
ಇದನ್ನೂ ಓದಿ: ದಸರಾ ಗಜಪಯಣಕ್ಕೆ ಚಾಲನೆ: ಮೈಸೂರಿನತ್ತ ತೆರಳಿದ ಅಭಿಮನ್ಯು ನೇತತ್ವದ ಗಜಪಡೆ
Related Articles
ಮಹಾರಾಷ್ಟ್ರದಲ್ಲಿ ಒಟ್ಟು 13,84,446 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದವು. ಈವರೆಗೆ 36,662 ಮಂದಿ ಸಾವನ್ನಪ್ಪಿದ್ದಾರೆ. ನಂತರ ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ, ಉತ್ತರಪ್ರದೇಶ ಮತ್ತು ದಿಲ್ಲಿಯಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿದೆ.