Advertisement

ದೇಶದಲ್ಲಿ ದಾಖಲೆಯ 12 ಲಕ್ಷ ಸಕ್ರಿಯ ಕೋವಿಡ್ ಪ್ರಕರಣ, 24ಗಂಟೆಯಲ್ಲಿ 1.68 ಲಕ್ಷ ಕೇಸ್ ಪತ್ತೆ

11:25 AM Apr 12, 2021 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 1.68 ಲಕ್ಷ ದಾಖಲೆ ಪ್ರಮಾಣದ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, ಹೊಸ ಸೋಂಕಿತರೊಂಗಿದೆ ಸಕ್ರಿಯ ಪ್ರಕರಣಗಳ ಸಂಖ್ಯೆ 12,.01 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಸೋಮವಾರ(ಏಪ್ರಿಲ್ 12) ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿ ಅಂಶದಲ್ಲಿ ತಿಳಿಸಿದೆ.

Advertisement

ದೇಶದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 1,21,56,529ಕ್ಕೆ ಏರಿಕೆಯಾಗಿದ್ದು, ಇದರಲ್ಲಿ 12,01,009 ಕೋವಿಡ್ ಸಕ್ರಿಯ ಪ್ರಕರಣ ವರದಿಯಾಗಿದೆ. ಕಳೆದ 24ಗಂಟೆಗಳಲ್ಲಿ ಕೋವಿಡ್ ನಿಂದ 75,086 ಮಂದಿ ಚೇತರಿಸಿಕೊಂಡಿದ್ದಾರೆ.

ಭಾರತದಲ್ಲಿ ಈವರೆಗೆ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,21,56,529ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 1.70 ಲಕ್ಷಕ್ಕೆ ಹೆಚ್ಚಳವಾಗಿದೆ ಎಂದು ಅಂಕಿಅಂಶ ತಿಳಿಸಿದೆ.

ಮಹಾರಾಷ್ಟ್ರ, ಚತ್ತೀಸ್ ಗಢ್, ಕರ್ನಾಟಕ, ಉತ್ತರಪ್ರದೇಶ ಮತ್ತು ಕೇರಳದಲ್ಲಿ ಕೋವಿಡ್ ಸೋಂಕು ಪ್ರಕರಣ ಹೆಚ್ಚಳವಾಗುತ್ತಿದೆ. ಕರ್ನಾಟಕ, ದೆಹಲಿ, ತಮಿಳುನಾಡು, ಪಂಜಾಬ್, ಗುಜರಾತ್ ಸೇರಿದಂತೆ ಹತ್ತು ರಾಜ್ಯಗಳಲ್ಲಿ ಶೇ.86ರಷ್ಟು ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವುದು ವರದಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next