Advertisement

24 ಗಂಟೆಯಲ್ಲಿ 40,425 ಮಂದಿಗೆ ಕೋವಿಡ್ ಸೋಂಕು ದೃಢ: 11 ಲಕ್ಷ ದಾಟಿದ ದೇಶದ ಸೋಂಕಿತರ ಸಂಖ್ಯೆ

04:03 PM Jul 20, 2020 | keerthan |

ಹೊಸದಿಲ್ಲಿ: ದೇಶದಲ್ಲಿ ಕೋವಿಡ್ -19 ಸೋಂಕು ನಿಯಂತ್ರಣಕ್ಕೆ ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿದ್ದರು, ಸೋಂಕಿತರ ಸಂಖ್ಯೆ ಮಾತ್ರ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 40,425 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ.

Advertisement

ದೇಶದ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ 11 ಲಕ್ಷ ದಾಟಿದೆ. ದೇಶದ ಒಟ್ಟು ಸೋಂಕಿತರ ಸಂಖ್ಯೆ 11, 18, 043 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 681 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ದೇಶದ ಸೋಂಕಿತರ ಸಾವಿನ ಸಂಖ್ಯೆ 27,497 ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸದ್ಯ 3,90,459 ಸಕ್ರಿಯ ಪ್ರಕರಣಗಳಿವೆ. ಏಳು ಲಕ್ಷಕ್ಕಿಂತಲೂ ಹೆಚ್ಚು ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಮಹಾರಾಷ್ಟ್ರದ ಒಟ್ಟು ಸೋಂಕಿತರ ಸಂಖ್ಯೆ 1,29,032ಕ್ಕೆ ಏರಿಕೆಯಾಗಿದೆ. 11,800ಕ್ಕಿಂತ ಹೆಚ್ಚು ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

ಕರ್ನಾಟಕದಲ್ಲಿ ರವಿವಾರ 4120 ಮಂದಿಗೆ ಕೋವಿಡ್ 19 ಸೋಂಕು ದೃಢವಾಗಿದೆ. ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 63772 ಕ್ಕೆ ಏರಿಕೆಯಾಗಿದೆ.

Advertisement

ನಿನ್ನೆಯವರೆಗೆ ದೇಶದಲ್ಲಿ 1,40, 47,908 ಮಂದಿಗೆ ಸೋಂಕಿನ ಪರೀಕ್ಷೆ ಮಾಡಿಸಲಾಗಿದೆ. ಅವರಲ್ಲಿ ನಿನ್ನೆ ಒಂದೇ ದಿನ 2,56,039 ಮಂದಿಗೆ ಪರೀಕ್ಷೆ ಮಾಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next