ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಒಂದು ಲಕ್ಷ ಗಡಿ(1,03,558)ಯನ್ನು ದಾಟಿ ಹೋಗಿದ್ದು, ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 1,25,89,067ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ(ಏಪ್ರಿಲ್ 05) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಮೈತುಂಬಾ ಟ್ಯಾಟೂ ಹಾಕಿಸಿಕೊಂಡಿರುವ ಈ ತಾತನ ಆಸೆಯೇ ವಿಚಿತ್ರ!
ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 1,03,558 ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, 478 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ಹೇಳಿದೆ. ದೇಶದಲ್ಲಿ ಸಕ್ರಿಯ ಕೋವಿಡ್ ಸೋಂಕು ಪ್ರಕರಣ ಇದೀಗ 7.41 ಲಕ್ಷ ದಾಟಿದೆ. ಒಟ್ಟು ಸಾವಿನ ಸಂಖ್ಯೆ 1.65ಲಕ್ಷಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕು ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿದ್ದು, ಕಳೆದ ವರ್ಷ ರಾಜ್ಯದಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 30 ಲಕ್ಷದಷ್ಟಿತ್ತು. ಭಾನುವಾರ ಮಹಾರಾಷ್ಟ್ರದಲ್ಲಿ 57,074 ಕೋವಿಡ್ ಪ್ರಕರಣ ವರದಿಯಾಗಿದೆ.
ದೇಶದಲ್ಲಿ ಕೋವಿಡ್ ಸೋಂಕು ಸತತ 26 ದಿನಗಳಿಂದ ಏರಿಕೆಯಾಗುತ್ತಿದ್ದು, ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಎಂಟು ರಾಜ್ಯಗಳಲ್ಲ ಕೋವಿಡ್ ಸೋಂಕು ಪ್ರಕರಣ ಹೆಚ್ಚಳವಾಗುತ್ತಿದೆ. ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 4,52,445ಕ್ಕೆ ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.