ಹೊಸದಿಲ್ಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 3.57 ಲಕ್ಷ ಹೊಸ ಕೋವಿಡ್ 19 ಸೋಂಕಿತರು ಪತ್ತೆಯಾಗಿದೆ. ಇದರೊಂದಿಗೆ ದೇಶದ ಕೋವಿಡ್ 19 ಸೋಂಕಿತರ ಸಂಖ್ಯೆ ಎರಡು ಕೋಟಿ ಗಡಿ ದಾಟಿದೆ.
ಸೋಮವಾರ ಬೆಳಗ್ಗೆ ಬಂದ ವರದಿಯಲ್ಲಿ 3.68 ಲಕ್ಷ ಹೊಸ ಸೋಂಕಿತರು ಪತ್ತೆಯಾಗಿದ್ದರು. ಆದರೆ ಮಂಗಳವಾರದ ವರದಿಯಲ್ಲಿ ಈ ಸಂಖ್ಯೆ ಅಲ್ಪ ಇಳಿಮುಖವಾಗಿದ್ದು, 3.57 ಲಕ್ಷ ಜನರಿಗೆ ಸೋಂಕು ಪತ್ತೆಯಾಗಿದೆ.
ಇದನ್ನೂ ಓದಿ:ಲಾಕ್‌ಡೌನ್ ಒಂದೇ ಮದ್ದು ಎಂದು ಸರ್ಕಾರ ನಂಬಿಕೊಂಡಂತಿದೆ: ಕಾಂಗ್ರೆಸ್
ಸೋಮವಾರ 3,449 ಮಂದಿ ಸಾವಿಗೀಡಾಗಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆ 2,22,408ಕ್ಕೆ ಏರಿಕೆಯಾಗಿದೆ. ‘ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 34,47,133ಕ್ಕೆ ಏರಿದ್ದು, ಇದು ಒಟ್ಟು ಪ್ರಕರಣಗಳ ಪೈಕಿ ಶೇಕಡ 17ರಷ್ಟು ಪಾಲನ್ನು ಹೊಂದಿದೆ ಎಂದು ಸಚಿವಾಲಯ ತಿಳಿಸಿದೆ.
ಐದು ರಾಜ್ಯಗಳಲ್ಲಿ ಅತೀ ಹೆಚ್ಚಿನ ಸೋಂಕು ಪ್ರಕರಣಗಳು ಕಂಡು ಬರುತ್ತಿದೆ. ಮಹಾರಾಷ್ಟ್ರದಲ್ಲಿ 48,621 ಪ್ರಕರಣಗಳು, ನಂತರದ ಸ್ಥಾನದಲ್ಲಿರುವ ಕರ್ನಾಟಕದಲ್ಲಿ 44,438 ಪ್ರಕರಣಗಳು, ಉತ್ತರ ಪ್ರದೇಶ ರಾಜ್ಯದಲ್ಲಿ 29,052 ಪ್ರಕರಣಗಳು, ಕೇರಳದಲ್ಲಿ 26,011 ಪ್ರಕರಣಗಳು ಮತ್ತು ತಮಿಳುನಾಡಿನಲ್ಲಿ 20,952 ಪ್ರಕರಣಗಳು ದಾಖಲಾಗಿವೆ.
ಇದನ್ನೂ ಓದಿ: ಕೋವಿಡ್ ಸೋಂಕು ತಡೆಯಲು ಸಂಪೂರ್ಣ ಲಾಕ್ ಡೌನ್ ಒಂದೇ ಮಾರ್ಗ : ರಾಹುಲ್ ಗಾಂಧಿ