Advertisement

ಭಾರತದಲ್ಲಿ 30,000ಕ್ಕಿಂತ ಕೆಳಕ್ಕಿಳಿದ ಕೋವಿಡ್ ಪ್ರಕರಣಗಳ ಸಂಖ್ಯೆ, 347 ಮಂದಿ ಸಾವು

11:36 AM Feb 15, 2022 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 30,000ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,26,92,943ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ (ಫೆ.15) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಹಣದುಬ್ಬರ ಜನರಿಗೆ ಹೊರೆಯಾಗದು;ಆರ್‌ ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌

ದೇಶದಲ್ಲಿ ಒಂದೇ ದಿನದಲ್ಲಿ 27,409 ಕೋವಿಡ್ ಪ್ರಕರಣಗಳು ವರದಿಯಾಗಿದೆ. 347 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,09,358ಕ್ಕೆ ಏರಿಕೆಯಾಗಿದೆ.

ಕಳೆದ ಸತತ 9 ದಿನಗಳಿಂದ ಭಾರತದಲ್ಲಿ ಒಂದು ಲಕ್ಷಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೋವಿಡ್ ಸೋಂಕು ಪ್ರಕರಣ ವರದಿಯಾಗುತ್ತಿದೆ. ಕೋವಿಡ್ 19 ಚೇತರಿಕೆ ಪ್ರಮಾಣ ಶೇ.97.82ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ಒಂದೇ ದಿನದಲ್ಲಿ 55,755 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಅಲ್ಲದೇ ಭಾರತದ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇದೀಗ 4,23,127ಕ್ಕೆ ಇಳಿಕೆಯಾಗಿರುವುದಾಗಿ ಸಚಿವಾಲಯದ ಅಂಕಿಅಂಶ ವಿವರಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next