ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯ ಅವಧಿಯಲ್ಲಿ 2,40,842 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 26,530,132ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ.
ಇದೇ ಅವಧಿಯಲ್ಲಿ 3,741 ಮಂದಿ ಕೋವಿಡ್ ಸೋಂಕಿಗೆ ತಮ್ಮ ಪ್ರಾಣ ಕಳೆದುಕೊಂಡಿದ್ದು, ಒಟ್ಟಾರೆಯಾಗಿ 2,99,266 ಜನರು ವೈರಸ್ ನ ಕಾರಣದಿಂದ ಪ್ರಾಣ ತ್ಯಜಿಸಿದ್ದಾರೆ.
ಭಾರತದಲ್ಲಿ ಸೋಂಕಿಗೆ ತುತ್ತಾಗುವವರ ಪ್ರಮಾಣ ಕಡಿಮೆಯಾಗುತ್ತಿದ್ದು, ಸ್ಥಿರತೆ ಕಂಡುಬಂದಿದೆ. 7 ರಾಜ್ಯಗಳಲ್ಲಿ 10 ಸಾವಿರಕ್ಕಿಂತ ಹೆಚ್ಚು ಹೊಸ ಪ್ರಕರಣಗಳು ವರದಿಯಾಗುತ್ತಿದ್ದರೆ, 6 ರಾಜ್ಯಗಳಲ್ಲಿ 5 ಸಾವಿರಕ್ಕಿಂತ ಹೆಚ್ಚಿನ ಪ್ರಕರಣಗಳು ಪ್ರತಿನಿತ್ಯ ವರದಿಯಾಗುತ್ತಿದೆ. ಸುಮಾರು 93 ಜಿಲ್ಲೆಯಗಳಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ತಮಿಳುನಾಡು, ಆಂದ್ರಪ್ರದೇಶ, ಕೇರಳ, ಕರ್ನಾಟಕ, ತೆಲಂಗಾಣ, ಉತ್ತರಪ್ರದೇಶ ಮುಂತಾದ ರಾಜ್ಯಗಳಲ್ಲಿ ಲಾಕ್ ಡೌನ್ ಮಾದರಿಯ ಕರ್ಫ್ಯೂ ಜಾರಿಗೊಳಿಸಿದ ನಂತರ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ.
ಇದನ್ನು ಹೊರತುಪಡಿಸಿ ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಉತ್ತರಪ್ರದೇಶ, ಪಂಜಾಬ್, ಡೆಲ್ಲಿಗಳಲ್ಲಿ ಮರಣ ಪ್ರಮಾಣ ಹೆಚ್ಚಾಗಿದೆ ಎಂದು ಆರೋಗ್ಯ ಸಚಿವಾಲಯ ವರದಿಯಲ್ಲಿ ತಿಳಿಸಿದೆ.