ಹೊಸದಿಲ್ಲಿ: ದೇಶದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 1.61 ಲಕ್ಷ ಹೊಸ ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಇದೇ ವೇಳೆ ಶೇ.11.6 ಇದ್ದ ದೈನಂದಿನ ಪಾಸಿಟಿವಿಟಿ ದರ ಶೇ.9.26ಕ್ಕೆ ಇಳಿಕೆಯಾಗಿದೆ. ವಾರದ ಪಾಸಿಟಿವಿಟಿ ರೇಟ್ ಶೇ.14.15 ಇದೆ.
ಕಳೆದ 24 ಗಂಟೆ ಅವಧಿಯಲ್ಲಿ 1,61,386 ಮಂದಿಗೆ ಕೋವಿಡ್ ಸೋಂಕು ತಾಗಿರುವುದು ದೃಢವಾಗಿದೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 4,16,30,885ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 2,81,109 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಸದ್ಯ ಚೇತರಿಕೆ ದರ ಶೇ.94.91 ರಷ್ಟಿದೆ.
ದೇಶದಲ್ಲಿ ಸದ್ಯ 16,21,603 ಸಕ್ರಿಯ ಕೋವಿಡ್ ಸೋಂಕು ಪ್ರಕರಣಗಳಿವೆ. ಕಳೆದ 24 ಗಂಟೆ ಅವಧಿಯಲ್ಲಿ 1733 ಮಂದಿ ಕೋವಿಡ್ ಸೋಂಕಿತು ಮೃತಪಟ್ಟಿದ್ದಾರೆ. ಇದುವರೆಗೆ ದೇಶದಲ್ಲಿ ಒಟ್ಟು 497,975 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಕೇರಳ ರಾಜ್ಯದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 1063 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:ರೈಲ್ವೇ ಟಿಕೆಟ್ ಕೌಂಟರ್ ತೆರೆಯಲು ಆಗ್ರಹ; ಕೊಂಕಣ ರೈಲ್ವೇ ಜನರಲ್ ಕೌಂಟರ್ ಬಂದ್
ದೇಶಾದ್ಯಂತ ನಡೆಯುತ್ತಿರುವ ಕೋವಿಡ್ ಲಸಿಕೆ ಅಭಿಯಾನದಲ್ಲಿ ಇದುವರೆಗೆ 167.21 ಕೋಟಿ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ. ದೇಶದ ವಯಸ್ಕ ಜನಸಂಖ್ಯೆಯ ಶೇಕಡಾ 75 ಕ್ಕಿಂತ ಹೆಚ್ಚು ಜನರು ಈಗ ಕೊವಿಡ್-19 ವಿರುದ್ಧ ಸಂಪೂರ್ಣವಾಗಿ ಲಸಿಕೆಯನ್ನು ಪಡೆದಿದ್ದಾರೆ.