ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 1,72,433 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದು ಬುಧವಾರಕ್ಕಿಂತ ಶೇ.7ರಷ್ಟು ಹೆಚ್ಚಿನ ಪ್ರಮಾಣವಾಗಿದೆ. ಪಾಸಿಟಿವಿಟಿ ದರ ಕೂಡಾ ಶೇ.9.26ರಿಂದ ಶೇ.11ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಫೆ.03) ಬಿಡುಗಡೆಗೊಳಿಸಿರುವ ಅಂಕ ಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಕಾವೇರಿ ಕೂಗು ಯಶಸ್ಸು ದೇಶಕ್ಕೆ ಹರಡಬೇಕು: ನಟಿ ಜೂಹಿ ಚಾವ್ಲಾ
ದೇಶದಲ್ಲಿ ಕೋವಿಡ್ ನ ನೂತನ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಳದ ನಡುವೆಯೇ ಕೋವಿಡ್ ಪ್ರಕರಣಗಳು ಕೂಡಾ ವರದಿಯಾಗುತ್ತಿದೆ. ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 15,33,921ಕ್ಕೆ ತಲುಪಿದೆ.
24ಗಂಟೆಯ ಅವಧಿಯಲ್ಲಿ ಕೋವಿಡ್ ಸೋಂಕಿನಿಂದ 1,008 ಮಂದಿ ಸಾವನ್ನಪ್ಪಿದ್ದಾರೆ. ಇದರಲ್ಲಿ ಕೇರಳ ರಾಜ್ಯದಲ್ಲಿ ಸಾವನ್ನಪ್ಪಿರುವ 355 ಮಂದಿಯ ಅಂಕಿಅಂಶ ಸೇರಿರುವುದಾಗಿ ವರದಿ ಹೇಳಿದೆ.
ಒಂದೇ ದಿನದಲ್ಲಿ 2,59,107 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದು, ಇದರೊಂದಿಗೆ ಕೋವಿಡ್ ನಿಂದ ಚೇತರಿಸಿಕೊಂಡವ ಒಟ್ಟು ಸಂಖ್ಯೆ 3,97,70,414ಕ್ಕೆ ಏರಿಕೆಯಾಗಿದೆ ಎಂದು ಅಂಕಿಅಂಶದಲ್ಲಿ ತಿಳಿಸಿದೆ.
ಭಾರತದಲ್ಲಿ ಒಂದೇ ದಿನ 15,69,499 ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಮುಂಬಯಿಯಲ್ಲಿ ಒಂದು ಸಾವಿರಕ್ಕೂ ಅಧಿಕ ಕೋವಿಡ್ ಪ್ರಕರಣಗಳು ವರದಿಯಾಗಿದೆ. ರಾಷ್ಟ್ರರಾಜಧಾನಿ ದೆಹಲಿಯಲ್ಲಿ 1,128 ಕೋವಿಡ್ ಪ್ರಕರಣ ಪತ್ತೆಯಾಗಿದೆ.