ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 3,17,532 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 491 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ದೇಶದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,87,693ಕ್ಕೆ ಏರಿಕೆಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ(ಜನವರಿ 20) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ವಿಜಯ್ ಬರ್ತ್‌ಡೇ: ಹುಟ್ಟುಹಬ್ಬ ಆಚರಿಸುತ್ತಿಲ್ಲ, ಮನೆ ಬಳಿ ಬರಬೇಡಿ ಎಂದ ನಟ
ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 19,24,051ಕ್ಕೆ ಹೆಚ್ಚಳವಾಗಿದೆ. ಒಂದೇ ದಿನದಲ್ಲಿ 93,051 ಸಕ್ರಿಯ ಕೋವಿಡ್ ಪ್ರಕರಣ ವರದಿಯಾಗಿದೆ. ಭಾರತದಲ್ಲಿನ ಚೇತರಿಕೆ ಪ್ರಮಾಣ 93.69ಕ್ಕೆ ಇಳಿಕೆಯಾಗಿದೆ.
24ಗಂಟೆಯಲ್ಲಿ 2,23,990 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದು, ದೇಶಾದ್ಯಂತ ಒಟ್ಟು 3,58,07,029 ಮಂದಿ ಚೇತರಿಸಿಕೊಂಡಿರುವುದಾಗಿ ಅಂಕಿಅಂಶ ವಿವರಿಸಿದೆ. ಭಾರತದಲ್ಲಿ ಕೋವಿಡ್ ನ ನೂತನ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 9,287ಕ್ಕೆ ಏರಿಕೆಯಾಗಿದೆ.
ದಿನಂಪ್ರತಿಯ ಪಾಸಿಟಿವಿಟಿ ದರ 16.41ರಷ್ಟಿದ್ದು, ವಾರದ ಪಾಸಿಟಿವಿಟಿ ದರ 16.06ರಷ್ಟಿದೆ. ದೇಶಾದ್ಯಂತ ಈವರೆಗೆ 159.67 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ವರದಿ ತಿಳಿಸಿದೆ.