ನವದೆಹಲಿ: ಭಾರತದಲ್ಲಿ ಕೋವಿಡ್ ಸೋಂಕು ಪ್ರಕರಣ ಭಾರೀ ಪ್ರಮಾಣದಲ್ಲಿ ಇಳಿಮುಖವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 8,013 ಪ್ರಕರಣಗಳು ಪತ್ತೆಯಾಗಿದೆ. ಅಲ್ಲದೇ 119 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಫೆ.28) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಉಕ್ರೇನ್ ನಿಂದ ಆಗಮಿಸಿದ ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಕೆಎಸ್ಆರ್ ಟಿಸಿ ಪ್ರಯಾಣ
ದೇಶದಲ್ಲಿ ಈವರೆಗೆ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,13,843ಕ್ಕೆ ಏರಿಕೆಯಾಗಿದೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 10,2601ಕ್ಕೆ ತಲುಪಿದೆ ಎಂದು ಅಂಕಿಅಂಶ ವಿವರಿಸಿದೆ.
ಭಾರತದಲ್ಲಿ 24ಗಂಟೆಯಲ್ಲಿ 8,871 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಒಂದೇ ದಿನದಲ್ಲಿ 16,765 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,23,07,686ಕ್ಕೆ ತಲುಪಿದೆ.
ದೇಶದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.56ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.1.11ಕ್ಕೆ ಇಳಿಕೆಯಾಗಿದ್ದು, ವಾರದ ಪಾಸಿಟಿವಿಟಿ ದರ ಶೇ.1.17ರಷ್ಟಿದೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.