Advertisement

ಭಾರತದಲ್ಲಿ ಕೋವಿಡ್ ಸಂಖ್ಯೆ ಭಾರೀ ಇಳಿಕೆ; 24 ಗಂಟೆಯಲ್ಲಿ 67 ಸಾವಿರ ಪ್ರಕರಣ ಪತ್ತೆ

10:57 AM Feb 08, 2022 | Team Udayavani |

ನವದೆಹಲಿ:ಭಾರತದಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಭಾರೀ ಇಳಿಕೆಯಾಗುತ್ತಿದ್ದು, ಮಂಗಳವಾರ (ಫೆ.08) 67,597 ಕೋವಿಡ್ ಪ್ರಕರಣ ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಉಡುಪಿ ಎಂಜಿಎಂ ಕಾಲೇಜಿನಲ್ಲಿ ಹಿಜಾಬ್ ಗೆ ಪ್ರತಿಯಾಗಿ ಕೇಸರಿ ಪೇಟ: ಉದ್ವಿಗ್ನ ವಾತಾವರಣ

ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 9,94,891ಕ್ಕೆ ಇಳಿಕೆಯಾಗಿದೆ. 24ಗಂಟೆಯಲ್ಲಿ 13,46,534 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.5.02ರಷ್ಟಿದೆ, ವಾರದ ಪಾಸಿಟಿವಿಟಿ ದರ ಶೇ.8.30ರಷ್ಟಿದೆ ಎಂದು ಅಂಕಿಅಂಶ ವಿವರಿಸಿದೆ.

ಭಾರತದಲ್ಲಿ 24ಗಂಟೆಯಲ್ಲಿ 1,80,456 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದು, 1,188 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದರು. ಜಾಗತಿಕವಾಗಿ ಕೋವಿಡ್ ಪ್ರಕರಣಗಳ ಸಂಖ್ಯೆ ಒಟ್ಟು 39.7 ಕೋಟಿಗೆ ತಲುಪಿದೆ. ವಿಶ್ವಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ ಒಟ್ಟು 57 ಲಕ್ಷಕ್ಕೆ ಏರಿಕೆಯಾಗಿದೆ.

ಅಮೆರಿಕದಲ್ಲಿ ಅತೀ ಹೆಚ್ಚು ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ 7,68,48,718 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 9,05,521 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next