ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 1,17,100 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 302 ಮಂದಿ ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 4,83,178ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ(ಜನವರಿ 07) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಮೋದಿಯವರೇ ಪ್ರತಿಭಟನಾಕಾರರು ಇರುವ ಮಾರ್ಗವನ್ನೇ ಆರಿಸಿಕೊಂಡಿದ್ಯಾಕೆ?: ದಿನೇಶ್ ಗುಂಡೂರಾವ್
24ಗಂಟೆಯಲ್ಲಿ 85,962 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದ್ದು, ಇದರೊಂದಿಗೆ ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,71,363ಕ್ಕೆ ಏರಿಕೆಯಾಗಿದೆ.
ಒಂದೇ ದಿನದಲ್ಲಿ ಕೋವಿಡ್ ಸೋಂಕಿನಿಂದ 30,836 ಮಂದಿ ಗುಣಮುಖರಾಗಿದ್ದಾರೆ. ದೇಶಾದ್ಯಂತ ಒಟ್ಟು ಈವರೆಗೆ 3,43,71,845 ಮಂದಿ ಚೇತರಿಸಿಕೊಂಡಿದ್ದಾರೆ.
ಭಾರತದಲ್ಲಿ 24ಗಂಟೆಯಲ್ಲಿ 377 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ದೇಶಾದ್ಯಂತ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 3,007ಕ್ಕೆ ಏರಿಕೆಯಾಗಿದೆ. ಇದರಲ್ಲಿ 1,199 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿದ ಅಂಕಿಅಂಶದಲ್ಲಿ ತಿಳಿಸಿದೆ.
ಮಹಾರಾಷ್ಟ್ರದಲ್ಲಿ 876 ಒಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು, ದೆಹಲಿಯಲ್ಲಿ 465, ಕರ್ನಾಟಕದಲ್ಲಿ 333, ರಾಜಸ್ಥಾನ್ 291, ಕೇರಳ 284, ಗುಜರಾತ್ 204 ಮತ್ತು ತಮಿಳುನಾಡಿನಲ್ಲಿ 121 ಪ್ರಕರಣ ಪತ್ತೆಯಾಗಿದೆ.