Advertisement

ಕ್ರಿಪ್ಟೋ: ಆರ್ಥಿಕತೆ ಮೇಲೆ ದುಷ್ಪರಿಣಾಮ; ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ ಆತಂಕ

12:11 AM Nov 17, 2021 | Team Udayavani |

ಹೊಸದಿಲ್ಲಿ: “ಕ್ರಿಪ್ಟೋಕರೆನ್ಸಿಯನ್ನು ಭಾರತದಲ್ಲಿ ಬಳಸಲು ಅವಕಾಶ ಕಲ್ಪಿಸಿದರೆ ದೇಶದ ಆರ್ಥಿಕತೆಯ ಮೇಲೆ ದುಷ್ಪರಿಣಾಮಗಳು ಬೀರಲಿವೆ’ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಗವರ್ನರ್‌ ಶಕ್ತಿಕಾಂತ ದಾಸ್‌ ತಿಳಿಸಿದ್ದಾರೆ.

Advertisement

“ಎಸ್‌ಬಿಐ ಬ್ಯಾಂಕಿಂಗ್‌ ಆ್ಯಂಡ್‌ ಎಕನಾಮಿಕ್‌ ಸಮ್ಮೇಳನ’ದಲ್ಲಿ ಮಾತನಾಡಿದ ಅವರು, ಕ್ರಿಪ್ಟೋಕರೆನ್ಸಿಯಿಂದಾಗಿ ದೇಶದ ಆರ್ಥಿಕ ಸ್ಥಿರತೆಗೇ ಅಪಾಯ ತಂದೊಡ್ಡುವ ಭೀತಿ ಆವರಿಸಿದೆ.

ಹಾಗಾಗಿ ಇದರ ಬಗ್ಗೆ ನಿರ್ಧಾರ ಕೈಗೊಳ್ಳುವ ಮುನ್ನ ಆಳವಾಗಿ ಚರ್ಚಿಸುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.ಇದೇ ವೇಳೆ “ಕೊರೊನಾದಿಂದ ತತ್ತರಿಸಿದ್ದ ಭಾರತದ ಆರ್ಥಿಕತೆ, ಈಗ ಚೇತರಿಸಿಕೊಳ್ಳುತ್ತಿದೆ. ಅದಕ್ಕೆ ಪೂರಕವಾದ ಸಾಕ್ಷಿಗಳು ಈಗ ಅನೇಕ ಕ್ಷೇತ್ರಗಳಲ್ಲಿ ಎದ್ದು ಕಾಣುತ್ತಿದೆ.

2021-22ರ ಆರ್ಥಿಕ ವರ್ಷದ ಮೊದಲ ತ್ತೈಮಾಸಿಕ ಅವಧಿಯಲ್ಲಿ ಬಂಡವಾಳ ಹೂಡಿಕೆಯಲ್ಲಿ ಚೇತರಿಕೆ ಬಂದಿದೆ. ಈ ಸಂದರ್ಭದಲ್ಲಿ ಹೆಚ್ಚಿನ ಮಟ್ಟದ ಹೂಡಿಕೆ ಮಾಡಿಕೊಳ್ಳಲು ಬ್ಯಾಂಕ್‌ಗಳು ಸಿದ್ಧವಿರಬೇಕು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಬೆಂಗಳೂರು ಮೆಟ್ರೋ ರೈಲು ಸಂಚಾರ ಅವಧಿ ವಿಸ್ತರಣೆ

Advertisement

“ಸಾರ್ವಜನಿಕರ ಕೊಳ್ಳುವ ಶಕ್ತಿ ಇನ್ನೂ ಮೊದಲಿನ ಮಟ್ಟಕ್ಕೆ ಏರಿಕೆಯಾಗಿಲ್ಲ. ಕೇಂದ್ರ ಹಾಗೂ ಕೆಲವು ರಾಜ್ಯ ಸರಕಾರಗಳು ತೈಲಗಳ ಮೇಲಿನ ವ್ಯಾಟ್‌ ತೆರಿಗೆಯನ್ನು ಕಡಿಮೆಗೊಳಿಸುವ ಮೂಲಕ ಜನರ ಮೇಲಿದ್ದ ಹೊರೆಯನ್ನು ಕೊಂಚ ಇಳಿಸಿದ್ದಾರೆ. ಇದು ಜನರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸುತ್ತದೆ” ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next