Advertisement
ಬುಧವಾರ, ನವದೆಹಲಿಯಲ್ಲಿ ನಡೆದ ಭಾರತೀಯ ಕೈಗಾರಿಕೆಗಳ ಒಕ್ಕೂಟದ (ಸಿಐಐ) ಸದಸ್ಯರ ವಾರ್ಷಿಕ ಸಮ್ಮೇಳನದಲ್ಲಿ ಮಾತನಾಡಿದ ಅವರು, “ತೆರಿಗೆ ವಿಚಾರದಲ್ಲಿ ಈ ಹಿಂದಿನ ತಪ್ಪನ್ನು ನಮ್ಮ ಸರ್ಕಾರ ಸರಿಪಡಿಸಿದೆ. ಹಿಂದಿನ ಸರ್ಕಾರಗಳು ಮಾಡಿರುವ ಇಂಥ ತಪ್ಪುಗಳನ್ನು ಸರಿಪಡಿಸುವ ಉದ್ದೇಶದಿಂದ ನಮ್ಮ ಸರ್ಕಾರ ಹಲವಾರು ದಿಟ್ಟ ಹೆಜ್ಜೆಗಳನ್ನಿಟ್ಟಿದೆ. ಕೊರೊನಾದಂಥ ಕ್ಲಿಷ್ಟ ಪರಿಸ್ಥಿತಿಯ ನಡುವೆಯೂ ಇಂಥ ನಿರ್ಧಾರಗಳು ದಿಕ್ಕುತಪ್ಪದಂತೆ ಎಚ್ಚರಿಕೆ ವಹಿಸಲಾಗಿದೆ” ಎಂದರು.
ವಿದೇಶಿ ಬಂಡವಾಳ ಹೂಡಿಕೆಯನ್ನು ಸರಾಗವಾಗಿಸಲು ಬೇಕಾದ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ನಮ್ಮ ಸರ್ಕಾರ ಇತ್ತೀಚಿನ ವರ್ಷಗಳಲ್ಲಿ ಕೈಗೊಂಡಿದ್ದರಿಂದಲೇ ಹೆಚ್ಚಿನ ಪ್ರಮಾಣದಲ್ಲಿ ಬಂಡವಾಳ ಹರಿದುಬರುತ್ತಿದೆ. ಕೈಗಾರಿಕೆಗಳ ಬೆಳವಣಿಗೆಗೆ ಬೇಕಾದ ಎಲ್ಲಾ ರೀತಿಯ ಸಹಕಾರವನ್ನು ನಮ್ಮ ಸರ್ಕಾರ ಕೊಡುತ್ತದೆ ಎಂದು ಮೋದಿ ಆಶ್ವಾಸನೆ ನೀಡಿದರು. ಜತೆಗೆ ದೇಶದ ಅರ್ಥ ವ್ಯವಸ್ಥೆಯೂ ಚೇತರಿಸಿಕೊಳ್ಳುತ್ತಿದೆ ಎಂದರು.