ಬೆಂಗಳೂರು : ಉಕ್ರೇನ್ ವಿಚಾರದಲ್ಲಿ ಭಾರತದ ವಿದೇಶಾಂಗ ನೀತಿ ವಿಫಲವಾಗಿದೆ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಟೀಕಿಸಿದ್ದಾರೆ. ಸಂಸದ ಡಿ.ಕೆ.ಸುರೇಶ್ ಹಾಗೂ ವಿಧಾನ ಪರಿಷತ್ ವಿಪಕ್ಪ ನಾಯಕ ಬಿ.ಕೆ.ಹರಿಪ್ರಸಾದ್ ಈ ವಿಚಾರದಲ್ಲೂ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಸುರೇಶ್ , ಪ್ರಪಂಚವೇ ಉಕ್ರೇನ್ ಕಡೆ ತಿರುಗಿ ನೋಡುತ್ತಿದೆ. ಪ್ರಧಾನಿಗಳು ಸ್ಪಷ್ಟ ನಿಲುವು ತೆಗೆದುಕೊಂಡಿಲ್ಲ.ಇದು ಶೋಚನೀಯ ಸ್ಥಿತಿ.ಭಾರತೀಯರಿಗೆ ರಕ್ಷಣೆ ನೀಡೋದ್ರಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಮೋದಿ ಸರ್ಕಾರ ತೆಗೆದುಕೊಂಡಿಲ್ಲ.ಉಕ್ರೇನ್ ನಲ್ಲಿ ವಿದ್ಯಾರ್ಥಿಗಳು ಇವತ್ತು ಸಂಕಷ್ಟಕ್ಕೆ ಸಿಲುಕಿದ್ದಾರೆ.ಈಗ ತುರ್ತು ಕೆಲಸ ಮಾಡ್ತಿದ್ದಾರೆ.ಪ್ರಧಾನಿಗಳು ಕೂಡಲೇ ಭಾರತೀಯರ ರಕ್ಷಣೆಗೆ ಬೇಕಾದ ವ್ಯವಸ್ಥೆ ಮಾಡಬೇಕು ಎಂದಿದ್ದಾರೆ. ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮವಹಿಸಬೇಕು. ಅಂತರಾಷ್ಟ್ರೀಯ ಮಟ್ಟದಲ್ಲಿ ಶಾಂತಿ ಕಾಪಾಡುವ ಒತ್ತಡವನ್ನು ಭಾರತ ಸರ್ಕಾರ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.
ಉಕ್ರೇನ್ ನಲ್ಲಿ ಕನ್ನಡಿಗರ ರಕ್ಷಣೆ ವಿಚಾರ ಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ್ ಮಾತನಾಡಿ, ವಿದೇಶಾಂಗ ನೀತಿಯಲ್ಲಿ ಮೋದಿ ಸರ್ಕಾರ ವಿಫಲವಾಗಿದೆ. ನೆಹರು ನೀತಿ ಇವತ್ತು ಎಲ್ಲರು ಮಾತಾಡಿದ್ದಾರೆ.ನೆಹರು ವಿರುದ್ಧ ಮಾತಾಡೋ ಮೋದಿ, ಸಂಘದವರ ಬಗ್ಗೆ ಈಗ ಅರ್ಥ ಆಗ್ತಿದೆ ಎಂದು ವ್ಯಂಗ್ಯವಾಡಿದರು.
ಅಲಿಪ್ತ ನೀತಿ ಬಗ್ಗೆ ಮಾತಾಡಬೇಕಿತ್ತು. ಯುದ್ದಕ್ಕೂ ಮುನ್ನ ಕೇಂದ್ರ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕಾಗಿತ್ತು.ಆದರೆ ಮೋದಿ ಸರ್ಕಾರ ಯಾವುದೇ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳದೆ ಲಾಕ್ ಡೌನ್ ಘೋಷಣೆ ಮಾಡಿದ ಹಾಗೆ ಇದನ್ನು ಮಾಡಿದೆ ಎಂದು ಟೀಕಿಸಿದ್ದಾರೆ.