ಈ ಹಣಕಾಸಿನ ಮೊದಲ ತ್ತೈಮಾಸಿಕದಲ್ಲಿ ಭಾರತವು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಉಳಿದಿದೆ. ಇದೇ ತ್ತೈಮಾಸಿಕದಲ್ಲಿ ಚೀನಾ ಜಿಡಿಪಿ ಬೆಳವಣಿಗೆ ದರವು ಶೇ.6.3ರಷ್ಟು ದಾಖಲಾಗಿದೆ. ಕಳೆದ ವರ್ಷ ಬ್ರಿಟನ್ ಅನ್ನು ಹಿಂದಿಕ್ಕಿ ಭಾರತವು ವಿಶ್ವದ ಐದನೇ ಬೃಹತ್ ಆರ್ಥಿಕತೆ ಹೊಂದಿರುವ ರಾಷ್ಟ್ರ ಎಂಬ ಹಿರಿಮೆಗೆ ಪಾತ್ರವಾಯಿತು.
Advertisement
2023-24ರ ಏಪ್ರಿಲ್-ಜೂನ್ ತ್ತೈಮಾಸಿಕದಲ್ಲಿ ಭಾರತದ ಹಣಕಾಸು, ರಿಯಲ್ ಎಸ್ಟೇಟ್ ಮತ್ತು ವೃತ್ತಿಪರ ಕ್ಷೇತ್ರಗಳಲ್ಲಿ ಜಿಡಿಪಿ ದರವು ಶೇ.12.2ರಷ್ಟು ದಾಖಲಾಗಿದೆ. ಅದೇ ರೀತಿ ಕೃಷಿ ಕ್ಷೇತ್ರದಲ್ಲಿ ಶೇ. 3.5ರಷ್ಟು ದಾಖಲಾಗಿದೆ. ಆದರೆ ಉತ್ಪಾದನಾ ವಲಯದಲ್ಲಿ ಜಿಡಿಪಿ ದರವು ಕ್ಷೇಣಿಸಿದೆ. ಕಳೆದ ಹಣಕಾಸು ವರ್ಷದ ಮೊದಲ ತ್ತೈಮಾಸಿಕದಲ್ಲಿ ಶೇ.6.1ರಷ್ಟು ದಾಖಲಾಗಿತ್ತು. ಆದರೆ ಈ ವರ್ಷದ ಮೊದಲ ತ್ತೈಮಾಸಿಕದಲ್ಲಿ ಕೇವಲ ಶೇ. 4.7ರಷ್ಟು ದಾಖಲಾಗಿದೆ.