ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತದ ಬಂಗಾರದ ಬರ ನೀಗಿದೆ. ಪುರುಷರ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಬಂಗಾರದ ಪದಕ ಗೆದ್ದು ಕೊಂಡಿದ್ದಾರೆ.
ಇಂದು ನಡೆದ ಫೈನಲ್ ಪಂದ್ಯದಲ್ಲಿ ನೀರಜ್ ಚೋಪ್ರಾ ಆರಂಭದಿಂದಲೇ ಉತ್ತಮ ಪ್ರದರ್ಶನ ತೋರಿದರು. ಮೊದಲ ಪ್ರಯತ್ನದಲ್ಲಿ 87.03 ಮೀಟರ್ ಎಸೆದ ನೀರಜ್, ಎರಡನೇ ಪ್ರಯತ್ನದಲ್ಲಿ 87.58 ಮೀಟರ್ ಜಾವೆಲಿನ್ ಎಸೆದರು. ಆದರೆ ಮೂರನೇ ಪ್ರಯತ್ನದಲ್ಲಿ ನೀರಜ್ 76.79 ಮೀಟರ್ ಎಸೆದರು.
ನಾಲ್ಕನೇ ಸುತ್ತಿನಲ್ಲಿ ಫೌಲ್ ಆಯಿತು. ಐದನೇ ಸುತ್ತು ಕೂಡಾ ಫೌಲ್ ಆಯಿತು. ಅಂತಿಮ ಸುತ್ತಿನವರೆಗೂ ಗರಿಷ್ಠ ದೂರ ಕಾಪಾಡಿದ ನೀರಜ್ ಚೋಪ್ರಾ ಜಯಶಾಲಿಯಾದರು.
ಇದನ್ನೂ ಓದಿ:ಟೋಕಿಯೊ ಒಲಿಂಪಿಕ್ಸ್: ಕಂಚು ಗೆದ್ದ ಕುಸ್ತಿಪಟು ಭಜರಂಗ್ ಪೂನಿಯಾ
13 ವರ್ಷದ ಬಳಿಕ ಚಿನ್ನ: ಭಾರತದ ಒಲಿಂಪಿಕ್ಸ್ ನಲ್ಲಿ 13 ವರ್ಷಗಳ ಬಳಿಕ ಚಿನ್ನದ ಪದಕ ಗೆದ್ದಿತು. 2008ರ ಬೀಜಿಂಗ್ ಒಲಿಂಪಿಕ್ಸ್ ನಲ್ಲಿ 100 ಮೀಟರ್ ಏರ್ ರೈಫಲ್ ಶೂಟಿಂಗ್ ನಲ್ಲಿ ಅಭಿನವ್ ಬಿಂದ್ರಾ ಬಂಗಾರದ ಪದಕ ಗೆದ್ದುಕೊಂಡಿದ್ದರು.