ಹೊಸದಿಲ್ಲಿ : ಪಾಕಿಸ್ಥಾನದಲ್ಲಿನ ಜೈಶ್ ಎ ಮೊಹಮ್ಮದ್ ಉಗ್ರ ತರಬೇತಿ ಶಿಬಿರಗಳ ಮೇಲೆ ಭಾರತ ನಡೆಸಿರುವ ಮಿಲಿಟರಿಯೇತರ ದಾಳಿ ಅಪೇಕ್ಷಿತ ಉದ್ದೇಶವನ್ನು ಸಾಧಿಸಿದೆ ಮತ್ತು ಗಡಿಯಾಚೆಗಿನ ಭಯೋತ್ಪಾದನೆಯನ್ನು ಮಟ್ಟಹಾಕುವ ದೇಶದ ದೃಢ ಸಂಕಲ್ಪವನ್ನು ಪ್ರದರ್ಶಿಸಿದೆ.
ವಿದೇಶ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಅವರು ಸುದ್ದಿ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ.
ಭಾರತೀಯ ವಾಯು ಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರು ಚಲಾಯಿಸುತ್ತಿದ್ದ ಮಿಗ್ 21 ಬೈಸನ್ ಫೈಟರ್ ಜೆಟ್ ವಿಮಾನ ಪಾಕ್ ವಾಯುಪಡೆಯ ಎಫ್ 16 ಯುದ್ಧ ವಿಮಾನವನ್ನು ಹೊಡೆದುರುಳಿಸಿರುವುದನ್ನು ಪ್ರತ್ಯಕ್ಷ ದರ್ಶಿಗಳು ಮತ್ತು ವಿದ್ಯುನ್ಮಾನ ಸಾಕ್ಷ್ಯಗಳು ಸಾಬೀತುಪಡಿಸಿವೆ ಎಂದು ರವೀಶ್ ಕುಮಾರ್ ಹೇಳಿದರು.