Advertisement

ಆಸೀಸ್ ಎದುರು ಏಕದಿನ ಸರಣಿಗೆ ತಂಡ ಪ್ರಕಟ: ಮೊದಲ ಪಂದ್ಯಕ್ಕಿಲ್ಲ ರೋಹಿತ್

06:15 PM Feb 19, 2023 | Team Udayavani |

ಮುಂಬಯಿ : ಮಾರ್ಚ್ 17 ರಿಂದ ಆರಂಭವಾಗಲಿರುವ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಬಿಸಿಸಿಐ ಭಾನುವಾರ ಭಾರತ ತಂಡವನ್ನು ಪ್ರಕಟಿಸಿದೆ.

Advertisement

ರೋಹಿತ್ ಶರ್ಮಾ (ನಾಯಕ), ಶುಭ್ ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ ), ಆರ್ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಾಹಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ , ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಜಯದೇವ್ ಉನದ್ಕತ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಕುಟುಂಬದ ಕಾರ್ಯಕ್ರಮದ ಕಾರಣದಿಂದಾಗಿ ರೋಹಿತ್ ಶರ್ಮಾ ಮೊದಲ ಏಕದಿನ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ಹಾರ್ದಿಕ್ ಪಾಂಡ್ಯ ಮೊದಲ ಪಂದ್ಯದಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.

ಮಾರ್ಚ್ 17 ರಂದು ಸರಣಿಯ ಮೊದಲ ಪಂದ್ಯ ಮುಂಬೈ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಮಾರ್ಚ್ 19, ರಂದು 2 ನೇ ಪಂದ್ಯ ಡಾ.ವೈ.ಎಸ್. ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂ, ವಿಶಾಖಪಟ್ಟಣದಲ್ಲಿ ಮತ್ತು ಮಾರ್ಚ್ 22 ರಂದು 3 ನೇ ಪಂದ್ಯ ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈನಲ್ಲಿ ನಡೆಯಲಿದೆ. ಮೂರೂ ಪಂದ್ಯಗಳು ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿವೆ.

Advertisement

Udayavani is now on Telegram. Click here to join our channel and stay updated with the latest news.

Next