Advertisement

Haryana: ಬಿಜೆಪಿ ವಿರುದ್ಧವೇ ಬಂಡಾಯ, ಸ್ವತಂತ್ರ ಅಭ್ಯರ್ಥಿಯಾಗಿ ಸಾವಿತ್ರಿ ಜಿಂದಾಲ್ ನಾಮಪತ್ರ

10:15 AM Sep 13, 2024 | Team Udayavani |

ನವದೆಹಲಿ : ಹರಿಯಾಣ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು ಈ ನಡುವೆ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. ಅದರಂತೆ ಭಾರತದ ಶ್ರೀಮಂತ ಮಹಿಳಾ ಉದ್ಯಮಿ ಸಾವಿತ್ರಿ ಜಿಂದಾಲ್ ಅವರು ಬಿಜೆಪಿ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ ಹಾಗಾಗಿ ಹಿಸಾರ್ ವಿಧಾನ ಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಲು ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ.

Advertisement

ಸಾವಿತ್ರಿ ಜಿಂದಾಲ್ ಹಿಸಾರ್ ನಿಂದ ಬಿಜೆಪಿ ಟಿಕೆಟ್ ಬಯಸಿದ್ದರು. ಆದರೆ ಪಕ್ಷವು ಆರೋಗ್ಯ ಸಚಿವ ಹಾಗೂ ಹಾಲಿ ಶಾಸಕ ಕಮಲ್ ಗುಪ್ತಾ ಅವರಿಗೆ ಟಿಕೆಟ್ ನೀಡಿದೆ. ಇದಾದ ನಂತರ ಅವರು ಸೆಪ್ಟೆಂಬರ್ 9 ರಂದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದರು. ಬೆಂಬಲಿಗರು ಏನು ಹೇಳಿದರೂ ಮಾಡುತ್ತೇನೆ ಎಂದು ಜಿಂದಾಲ್ ಹೇಳಿದ್ದಾರೆ. ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ನಾನು ಖಂಡಿತವಾಗಿಯೂ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಇದು ನನ್ನ ಕೊನೆಯ ಚುನಾವಣೆ, ನಾನು ಸೇವೆ ಮಾಡಲು ಬಯಸುತ್ತೇನೆ.

ಬಿಜೆಪಿ ಮನವೊಲಿಸಲು ಯತ್ನಿಸಿತು:
ಜಿಂದಾಲ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಕುರಿತು ಮಾಹಿತಿ ನೀಡುತಿದ್ದಂತೆ ಬಿಜೆಪಿ ನಾಯಕರು ಜಿಂದಾಲ್ ಅವರ ಮನವೊಲಿಸುವ ಪ್ರಯತ್ನ ಮಾಡಿದೆ ಆದರೆ ಮನವೊಲಿಕೆ ಯತ್ನ ವಿಫಲವಾಗಿದೆ ಅದರಂತೆ ಗುರುವಾರ (ಸೆ.12) ದಂದು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಸಾವಿತ್ರಿ ಜಿಂದಾಲ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದು ಬಿಜೆಪಿಗೆ ಮಾರಕವಾಗಬಹುದೇ ಎಂಬುದು ರಾಜಕೀಯ ನಾಯಕರ ಅಭಿಪ್ರಾಯವಾಗಿದ್ದು ಎಲ್ಲದಕ್ಕೂ ಚುನಾವಣೆ ಫಲಿತಾಂಶವೇ ಉತ್ತರ ನೀಡಲಿದೆ.

ಇದನ್ನೂ ಓದಿ: Kalaburagi: ಅಡುಗೆ ಸಹಾಯಕನಿಂದ ಲಂಚ… ಹಾಸ್ಟೆಲ್ ವಾರ್ಡನ್ ಲೋಕಾಯುಕ್ತ ಬಲೆಗೆ

Advertisement
Advertisement

Udayavani is now on Telegram. Click here to join our channel and stay updated with the latest news.

Next