Advertisement

ದೇಶದ ಬಾಹ್ಯಾಕಾಶ ಆರ್ಥಿಕತೆ 2025ಕ್ಕೆ ಲಕ್ಷ ಕೋಟಿ ರೂ. ಮೌಲ್ಯಕ್ಕೆ

08:08 PM Oct 10, 2022 | Team Udayavani |

ನವದೆಹಲಿ: ಭಾರತದ ಬಾಹ್ಯಾಕಾಶ ಆರ್ಥಿಕತೆಯು ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, 2025ರ ವೇಳೆಗೆ ಒಂದು ಲಕ್ಷ ಕೋಟಿ ರೂ.ಗೆ ತಲುಪಲಿದೆ ಎಂದು ವರದಿಯೊಂದು ಹೇಳಿದೆ.

Advertisement

ಇಂಡಿಯನ್‌ ಸ್ಪೇಸ್‌ ಅಸೋಸಿಯೇಷನ್‌ (ಐಎಸ್‌ಪಿಎ) ಮತ್ತು ಅನ್‌ ಆ್ಯಂಡ್‌ ಯಂಗ್‌ ಸಂಸ್ಥೆ ಜಂಟಿಯಾಗಿ ತಯಾರಿಸಿರುವ “ಭಾರತದಲ್ಲಿ ಬಾಹ್ಯಾಕಾಶ ಆರ್ಥಿಕತೆ ಬೆಳವಣಿಗೆ: ಅಂತರ್ಗತ ಬೆಳವಣಿಗೆ ಮೇಲೆ ಕೇಂದ್ರೀಕೃತ’ ಎನ್ನುವ ವರದಿಯಿಂದ ಈ ಅಂಶ ಬೆಳಕಿಗೆ ಬಂದಿದೆ.

ಭಾರತೀಯ ಸರ್ಕಾರವು ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ಸಂಸ್ಥೆಗಳಿಗೂ ಅವಕಾಶ ಮಾಡಿಕೊಟ್ಟಿದೆ. ಇದರಿಂದಾಗಿ ಹೆಚ್ಚು ಹೆಚ್ಚು ಸ್ಟಾರ್ಟ್‌ಅಪ್‌ ಸಂಸ್ಥೆಗಳು ಬಾಹ್ಯಾಕಾಶದತ್ತ ಮುಖ ಮಾಡಿ, ಸಣ್ಣ ಸಣ್ಣ ಉಪಗ್ರಹಗಳನ್ನು ಉಡಾವಣೆ ಮಾಡುತ್ತಿವೆ.

2020ರಲ್ಲಿ 79 ಸಾವಿರ ಕೋಟಿ ರೂ.ನಷ್ಟಿದ್ದ ಬಾಹ್ಯಾಕಾಶ ಆರ್ಥಿಕತೆ ವೇಗವಾಗಿ ಅಭಿವೃದ್ಧಿಯಾಗುತ್ತಿದ್ದು, ಆದಷ್ಟು ಬೇಗ ಲಕ್ಷ ಕೋಟಿ ರೂ. ಆಗಲಿದೆ’ ಎಂದು ವರದಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next