ಮುಂಬಯಿ : ಇದೇ ತಿಂಗಳಿನಲ್ಲಿ ಐರ್ಲೆಂಡ್ ನಲ್ಲಿ ನಡೆಯಲಿರುವ ಎರಡು ಟಿ 20 ಪಂದ್ಯಗಳಿಗೆ ಬಿಸಿಸಿಐ ಭಾರತ ತಂಡವನ್ನು ಬುಧವಾರ ಪ್ರಕಟಿಸಿದ್ದು, ಹಾರ್ದಿಕ್ ಪಾಂಡ್ಯ ನಾಯಕತ್ವ ವಹಿಸಲಿದ್ದಾರೆ.
ಜೂನ್ 26 ರಂದು ಐರ್ಲೆಂಡ್ ನ ಮಲಾಹೈಡ್ ನಲ್ಲಿ ಮೊದಲ ಟಿ 20, ಜೂನ್ 28 ರಂದು 2ನೇ ಟಿ 20 ಪಂದ್ಯಗಳು ನಡೆಯಲಿವೆ.
ತಂಡ ಇಂತಿದೆ
ಹಾರ್ದಿಕ್ ಪಾಂಡ್ಯ (ನಾಯಕ), ಭುವನೇಶ್ವರ್ ಕುಮಾರ್ (ಉಪನಾಯಕ) ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿ.ಕೀ), ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಆರ್ ಬಿಷ್ಣೋಯ್, ಹರ್ಷಲ್ ಪಟೇಲ್ , ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್.