Advertisement
ಅವರು ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ 2017-18ನೇ ಸಾಲಿನ ಪ.ಜಾತಿ ಉಪಯೋಜನೆಯಡಿ ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ನೂತನ ಕಾಲೇಜಿನ ಕಟ್ಟಡದ ಅಕ್ಷರ ದಾಸೋಹ ಕೊಠಡಿಯನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು. ಸಹೋದರತೆ, ಪ್ರೀತಿ, ವಿಶ್ವಾಸವನ್ನು ಕಲಿಸುವುದು ಇಂದಿನ ಶಿಕ್ಷಣದ ಅಗತ್ಯವಾ ಗಿದೆ. ಗ್ರಾಮೀಣ ಮಕ್ಕಳಿಗೂ ಗುಣಮಟ್ಟದ ಆಂಗ್ಲಮಾಧ್ಯಮ ಶಿಕ್ಷಣ ದೊರೆಯುವಂತೆ ಮಾಡಲು ಸರಕಾರ ಗ್ರಾಮೀಣ ಮಟ್ಟದಲ್ಲಿ ಆಂಗ್ಲ ಮಾಧ್ಯಮ ಸರಕಾರಿ ಶಾಲೆಗಳನ್ನು ಆರಂಭಿಸಿದೆ. ಹೆತ್ತವರು ಇದರ ಸದು ಪಯೋಗಪಡಿಸಿ ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸಿ ಯೋಜನೆಯ ಲಾಭ ಪಡೆಯಬೇಕೆಂದು ಖಾದರ್ ತಿಳಿಸಿದರು.
ನೂತನ ಕಟ್ಟಡದ ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿದ್ದ ಸುಳ್ಯ ಶಾಸಕ ಎಸ್. ಅಂಗಾರ ಮಾತನಾಡಿ, ಹೆತ್ತವರಲ್ಲಿ ಸರಕಾರಿ ಮತ್ತು ಖಾಸಗಿ ಎನ್ನುವ ಭಾವನೆಗೆ ಆಡಳಿತ ವ್ಯವಸ್ಥೆಯೇ ಕಾರಣ. ಉತ್ತಮ ಗುಣಮಟ್ಟದ ಶಿಕ್ಷಣ ಸರಕಾರಿ ಶಾಲೆಯಲ್ಲೂ ಸಿಗುತ್ತಿದೆ. ಅದಕ್ಕೆ ಬೇಕಾದ ಮೂಲ ಸೌಲಭ್ಯಗಳನ್ನು ಸರಕಾರ ಒದಗಿಸಬೇಕು. ಸರಕಾರ ಆರಂಭಿಸಿರುವ ಪಬ್ಲಿಕ್ ಸ್ಕೂಲ್ ಯೋಜನೆ ಪರಿಣಾಮಕಾರಿ ಯಾಗಲು ತರಗತಿಗೊಬ್ಬರಂತೆ ಶಿಕ್ಷಕರ ನೇಮಕವಾಗಬೇಕು. ಹೆತ್ತವರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ಕಳುಹಿಸಿ ಸಹಕರಿಸಿದಾಗ ಯೋಜನೆ ಫಲಿಸ ಬಹುದು ಎಂದರು. ಸರಕಾರಕ್ಕೆ ಮನವಿ ಸಲ್ಲಿಕೆ
ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವ ಎಸ್.ಪಿ. ಮಾತನಾಡಿ, ತಾಲೂಕಿನ ಮೂರು ಶಾಲೆಗಳಲ್ಲಿ ಈ ವರ್ಷದಿಂದ ಆಂಗ್ಲಮಾಧ್ಯಮ ತರಗತಿ ಆರಂಭವಾಗಿದೆ. ಮುಂದಿನ ವರ್ಷ ಇನ್ನೂ 6 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸಲು ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ. ತಾಲೂಕಿನಲ್ಲೇ ಅತೀ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ಬೆಳ್ಳಾರೆ ಕೆಪಿಎಸ್ ಮಾದರಿ ಶಾಲೆಯಾಗಿ ಪರಿವರ್ತನೆಯಾಗಲು ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.
Related Articles
Advertisement
ಜಿ.ಪಂ. ಸದಸ್ಯ ಎಸ್.ಎನ್. ಮನ್ಮಥ, ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷೆ ಶಕುಂತಳಾ ನಾಗರಾಜ್, ಪೆರುವಾಜೆ ಗ್ರಾ.ಪಂ. ಅಧ್ಯಕ್ಷೆ ಅನಸೂಯಾ, ಪಂಜ ಗ್ರಾ.ಪಂ. ಅಧ್ಯಕ್ಷ ಕಾರ್ಯಪ್ಪ ಗೌಡ ಚಿದ್ಗಲ್ಲು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯೆ ರಾಜೀವಿ ಆರ್. ರೈ, ನಿವೃತ್ತ ಪ್ರಾಂಶುಪಾಲ ಯು. ಸುಬ್ರಾಯ ಗೌಡ, ಗ್ರಾ.ಪಂ. ಉಪಾಧ್ಯಕ್ಷ ಮುಸ್ತಾಫಾ,
ಗ್ರಾ.ಪಂ. ಸದಸ್ಯ ಆರೀಫ್, ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಶಾಂತಾರಾಮ್ ಕಣಿಲೆಗುಂಡಿ, ಅಧ್ಯಕ್ಷ ಬಾಳಪ್ಪ, ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೇಶವ ನಾಯಕ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಜಾನಕಿ ಉಪಸ್ಥಿತರಿದ್ದರು. ಕೆಪಿಎಸ್ ಪ್ರಾಂಶುಪಾಲೆ ಹಸೀನಾ ಭಾನು ಪ್ರಸ್ತಾವಿಸಿದರು. ಶಿಕ್ಷಕ ರಾಮಚಂದ್ರ ಭಟ್ ಮುಗುಳಿ ಸ್ವಾಗತಿಸಿದರು. ಉಪಪ್ರಾಂಶುಪಾಲೆ ಉಮಾಕುಮಾರಿ ವಂದಿಸಿದರು. ಶಿಕ್ಷಕಿ ಮಮತಾ ಮೂಡಿತ್ತಾಯ ನಿರ್ವಹಿಸಿದರು.
ಖಾದರ್ ಆರೋಗ್ಯ ಪಾಠಸಮಾರಂಭದಲ್ಲಿ ಸಚಿವ ಯು.ಟಿ. ಖಾದರ್ ನೀರಿಗೆ ದೇಹದ ಎಲ್ಲ ರೋಗಗಳನ್ನು ಹೋಗಲಾಡಿಸುವ ಶಕ್ತಿ ಇದೆ. ಒಂದು ತರಗತಿಯಾದ ಬಳಿಕ ನೀರು ಕುಡಿಯಿರಿ. ಪ್ರತಿದಿನ ತರಗತಿ ಆರಂಭಕ್ಕೆ ಮೊದಲು ಯೋಗ, ಧ್ಯಾನ, ಪ್ರಾಣಾಯಾಮ ಮಾಡಿ, ಕೈ ತೊಳೆದೇ ಊಟ ಮಾಡಿ ಎಂದು ವಿದ್ಯಾರ್ಥಿಗಳಿಗೆ ಆರೋಗ್ಯದ ಪಾಠ ಮಾಡಿದರು. ಜನಪ್ರತಿನಿಧಿಗಳು ಶಿಕ್ಷಕರಿಗೆ ಯಾವತ್ತೂ ಒತ್ತಡ ಮಾಡಬೇಡಿ ಎಂದು ಅವರು ಕಿವಿಮಾತು ಹೇಳಿದರು.