Advertisement

ವಿಂಡೀಸ್‌ ವಿರುದ್ಧದ ಟಿ20 ಸರಣಿ: ಟ್ರಿನಿಡಾಡ್‌ಗೆ ಆಗಮಿಸಿದ ರೋಹಿತ್‌ ಪಡೆ

11:57 PM Jul 26, 2022 | Team Udayavani |

ಪೋರ್ಟ್‌ ಆಫ್‌ ಸ್ಪೇನ್‌: ವೆಸ್ಟ್‌ ಇಂಡೀಸ್‌ ವಿರುದ್ಧ 5 ಪಂದ್ಯಗಳ ಟಿ20 ಸರಣಿಯಲ್ಲಿ ಪಾಲ್ಗೊಳ್ಳಲು ರೋಹಿತ್‌ ಶರ್ಮ ಬಳಗ ಮಂಗಳವಾರ ಟ್ರಿನಿಡಾಡ್‌ಗೆ ಬಂದಿಳಿಯಿತು.

Advertisement

ತಂಡದ ಪ್ರಮುಖರಾದ ದಿನೇಶ್‌ ಕಾರ್ತಿಕ್‌, ರಿಷಭ್‌ ಪಂತ್‌, ಆರ್‌. ಅಶ್ವಿ‌ನ್‌, ಭುವನೇಶ್ವರ್‌ ಕುಮಾರ್‌, ಕುಲದೀಪ್‌ ಯಾದವ್‌ ಕೂಡ ಆಗಮಿಸಿದ್ದಾರೆ. ಇದರ ವೀಡಿಯೋ ಒಂದನ್ನು ಬಿಸಿಸಿಐ ತನ್ನ ಟ್ವಿಟರ್‌ನಲ್ಲಿ ಅಪ್‌ಲೋಡ್‌ ಮಾಡಿದೆ. ಶುಕ್ರವಾರದಿಂದ ಟಿ20 ಸರಣಿ ಆರಂಭವಾಗಲಿದೆ. ಮೊದಲ 3 ಪಂದ್ಯ ವೆಸ್ಟ್‌ ಇಂಡೀಸ್‌ನಲ್ಲಿ, ಕೊನೆಯ 2 ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ.

ಪ್ರಸಕ್ತ ಸಾಗುತ್ತಿರುವ ಏಕದಿನ ಸರಣಿಗಾಗಿ ರೋಹಿತ್‌ ಶರ್ಮ ಸೇರಿದಂತೆ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿ ಶಿಖರ್‌ ಧವನ್‌ಗೆ ನಾಯಕತ್ವ ವಹಿಸಲಾಗಿತ್ತು.

ಟಿ20 ತಂಡ: ರೋಹಿತ್‌ ಶರ್ಮ (ನಾಯಕ), ಇಶಾನ್‌ ಕಿಶನ್‌, ಕೆ.ಎಲ್‌. ರಾಹುಲ್‌, ಸೂರ್ಯಕುಮಾರ್‌ ಯಾದವ್‌, ಶ್ರೇಯಸ್‌ ಅಯ್ಯರ್‌, ದೀಪಕ್‌ ಹೂಡಾ, ರಿಷಭ್‌ ಪಂತ್‌, ಹಾರ್ದಿಕ್‌ ಪಾಂಡ್ಯ, ದಿನೇಶ್‌ ಕಾರ್ತಿಕ್‌, ರವೀಂದ್ರ ಜಡೇಜ, ಆರ್‌. ಅಶ್ವಿ‌ನ್‌, ಅಕ್ಷರ್‌ ಪಟೇಲ್‌, ಭುವನೇಶ್ವರ್‌ ಕುಮಾರ್‌, ಆವೇಶ್‌ ಖಾನ್‌, ಅರ್ಷದೀಪ್‌ ಸಿಂಗ್‌, ಕುಲದೀಪ್‌ ಯಾದವ್‌, ರವಿ ಬಿಷ್ಣೋಯಿ.

Advertisement

Udayavani is now on Telegram. Click here to join our channel and stay updated with the latest news.

Next