ನವದೆಹಲಿ:ಕೋವಿಡ್ 19 ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಜಾರಿಯಾಗಿದ್ದ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ. ಮತ್ತೊಂದೆಡೆ ಕಳೆದ 24ಗಂಟೆಯಲ್ಲಿ ಭಾರತದಲ್ಲಿ 5,611 ಕೋವಿಡ್ ಪ್ರಕರಣ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ.
ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 1,06,750ಕ್ಕೆ ತಲುಪಿದೆ. ಕೋವಿಡ್ 19 ವೈರಸ್ ನಿಂದ ಸಾವನ್ನಪ್ಪಿದವರ ಸಂಖ್ಯೆ 3,300ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಸಚಿವಾಲಯ ಹೇಳಿದೆ.
ಕೋವಿಡ್ 19 ವೈರಸ್ ತಡೆಗಟ್ಟಲು ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಲಾಗಿತ್ತು. ಇದೀಗ ಮೂರು ಹಂತ ಮುಗಿದು ನಾಲ್ಕನೇ ಹಂತದಲ್ಲಿ ಲಾಕ್ ಡೌನ್ ನಿರ್ಬಂಧ ಸಡಿಲಿಕೆ ಮಾಡಿ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಅವಕಾಶ ಮಾಡಿಕೊಡಲಾಗಿದೆ.
ವಿವಿಧ ರಾಜ್ಯಗಳಲ್ಲಿಯೂ ಅಂತರ್ ರಾಜ್ಯಗಳಲ್ಲಿರುವ ಜನರು ಆಗಮಿಸಲು ಅವಕಾಶ ಮಾಡಿಕೊಟ್ಟಿದೆ. ಏತನ್ಮಧ್ಯೆ ಕೋವಿಡ್ 19 ಸೋಂಕಿತರ ಸಂಖ್ಯೆಯೂ ಹೆಚ್ಚಳವಾಗತೊಡಗಿದೆ ಎಂದು ತಿಳಿಸಿದೆ.