Advertisement

ನಿರುದ್ಯೋಗ ಪ್ರಮಾಣ ಶೇ.6.86ಕ್ಕೆ ಇಳಿಕೆ

12:31 AM Oct 08, 2021 | Team Udayavani |

ಹೊಸದಿಲ್ಲಿ: ದೇಶದಲ್ಲಿ ಆಗಸ್ಟ್‌ ತಿಂಗಳಲ್ಲಿ ಶೇ. 8.32ರಷ್ಟಿದ್ದ ನಿರುದ್ಯೋಗ ಪ್ರಮಾಣವು ಸೆಪ್ಟಂಬರ್‌ನಲ್ಲಿ ಶೇ. 6.86ಕ್ಕೆ ಇಳಿಕೆಯಾಗಿದೆ ಎಂದು ಭಾರತೀಯ ಆರ್ಥಿಕತೆಯ ಮೇಲ್ವಿಚಾರಣ ಕೇಂದ್ರ (ಸಿಎಂಇಐ) ತಿಳಿಸಿದೆ.

Advertisement

ಆಗಸ್ಟ್‌ನಲ್ಲಿ ಶೇ. 37.15ರಷ್ಟಿದ್ದ ಉದ್ಯೋಗ ಪ್ರಮಾಣವು ಸೆಪ್ಟಂಬರ್‌ನಲ್ಲಿ ಶೇ. 37.87ಕ್ಕೆ ಏರಿಕೆಯಾಗಿದೆ. ಒಂದೇ ತಿಂಗಳಲ್ಲಿ 85 ಲಕ್ಷ ಉದ್ಯೋಗ ಸೃಷ್ಟಿಯಾಗಿದ್ದು, ಅದರಲ್ಲಿ ಹೆಚ್ಚಿನ ಪಾಲು ಗ್ರಾಮೀಣ ಪ್ರದೇಶದಲ್ಲೇ ಆಗಿದೆ. ಕಟ್ಟಡ, ರಸ್ತೆ ನಿರ್ಮಾಣ ಕಾಮಗಾರಿ ಕ್ಷೇತ್ರದಲ್ಲೇ ಅತೀ ಹೆಚ್ಚು ಉದ್ಯೋಗ ಸೃಷ್ಟಿಯಾಗಿದೆ ಎಂದು ತಿಳಿಸಲಾಗಿದೆ.

ಸೆಪ್ಟಂಬರ್‌ನಲ್ಲಿ ಒಟ್ಟು 40.62 ಕೋಟಿ ಮಂದಿಗೆ ಉದ್ಯೋಗವಿತ್ತು ಎಂದು ಅಂದಾಜಿಸಲಾಗಿದೆ. ಇದು ಕಳೆದ 20 ತಿಂಗಳಲ್ಲಿ ಅತೀ ಹೆಚ್ಚಿನ ಸಂಖ್ಯೆಯಾಗಿದೆ. ಕೊರೊನಾಕ್ಕೂ ಮೊದಲು 40.89 ಕೋಟಿ ಮಂದಿಗೆ ಉದ್ಯೋಗವಿತ್ತು ಎಂದು ಹೇಳಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next