Advertisement

ಭಾರತ- ಪಾಕ್ ಕದನ: ಇಬ್ಬರು ಸ್ಪಿನ್ನರ್ ಗಳೊಂದಿಗೆ ಕಣಕ್ಕಿಳಿದ ರೋಹಿತ್

01:01 PM Oct 23, 2022 | Team Udayavani |

ಮೆಲ್ಬರ್ನ್: ಐಸಿಸಿ ಟಿ20 ವಿಶ್ವಕಪ್ ನ ಅತೀ ರೋಚಕ ಪಂದ್ಯಕ್ಕೆ ಮೆಲ್ಬರ್ನ್ ಕ್ರಿಕೆಟ್ ಮೈದಾನ ಸಜ್ಜಾಗಿದೆ. ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳು ತಮ್ಮ ಸೂಪರ್ 12 ನ ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ.

Advertisement

ಎಂಸಿಜಿ ಯಲ್ಲಿ ಟಾಸ್ ಗೆದ್ದ ರೋಹಿತ್ ಶರ್ಮಾ ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿದ್ದಾರೆ. ಎರಡೂ ತಂಡಗಳು ತಲಾ ಇಬ್ಬರು ಸ್ಪಿನ್ನರ್ ಗಳೊಂದಿಗೆ ಕಣಕ್ಕಿಳಿದಿರುವುದು ವಿಶೇಷ.

ಎರಡೂ ತಂಡಗಳು ಈ ಮಹತ್ವದ ಪಂದ್ಯಕ್ಕೆ ಭರ್ಜರಿ ತಯಾರಿ ನಡೆಸಿವೆ. ಕಳೆದ ವರ್ಷದ ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾವು ಮೊದಲ ಬಾರಿಗೆ ಪಾಕ್ ವಿರುದ್ಧ ಸೋಲಿನ ಅವಮಾನ ಅನುಭವಿಸಿತ್ತು. ಇದಕ್ಕೆ ಪ್ರತಿಕಾರ ತೀರಿಸಲು ರೋಹಿತ್ ಪಡೆ ಸಜ್ಜಾಗಿದೆ.

ಟೀಂ ಇಂಡಿಯಾವು ಅಭ್ಯಾಸ ಪಂದ್ಯದಲ್ಲಿ ಆತಿಥೇಯ ಅಸೀಸ್ ತಂಡವನ್ನು ಸೋಲಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಅತ್ತ ಪಾಕಿಸ್ಥಾನವು ಇಂಗ್ಲೆಂಡ್ ವಿರುದ್ಧ ಸೋಲನುಭವಿಸಿದೆ.

ಭಾರತ: ರೋಹಿತ್ ಶರ್ಮಾ (ನಾ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿ.ಕೀ), ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್.

Advertisement

ಪಾಕಿಸ್ತಾನ: ಬಾಬರ್ ಅಜಮ್ (ನಾ), ಮೊಹಮ್ಮದ್ ರಿಜ್ವಾನ್ (ವಿ.ಕೀ), ಶಾನ್ ಮಸೂದ್, ಹೈದರ್ ಅಲಿ, ಮೊಹಮ್ಮದ್ ನವಾಜ್, ಶಾದಾಬ್ ಖಾನ್, ಇಫ್ತಿಕರ್ ಅಹ್ಮದ್, ಆಸಿಫ್ ಅಲಿ, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ನಸೀಮ್ ಶಾ

Advertisement

Udayavani is now on Telegram. Click here to join our channel and stay updated with the latest news.

Next