ಹೊಸದಿಲ್ಲಿ: ಲಕ್ನೋದಿಂದ ಅಬುಧಾಬಿಗೆ ಹೊರಟಿದ್ದ ಇಂಡಿಗೋ ವಿಮಾನವು ಹೈಡ್ರಾಲಿಕ್ ಸಿಸ್ಟಮ್ ಸಮಸ್ಯೆಯ ಕಾರಣದಿಂದ ಶನಿವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಮೂಲಗಳು ತಿಳಿಸಿವೆ.
6E 093 ಫ್ಲೈಟ್ ನಲ್ಲಿ 150 ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:YashoBhoomi; ತಮ್ಮ ಜನ್ಮದಿನದಂದು ಯಶೋಭೂಮಿ ಸಮಾವೇಶ ಕೇಂದ್ರ ಉದ್ಘಾಟಿಸಿದ ಪ್ರಧಾನಿ ಮೋದಿ
ವಿಮಾನವು ಹೈಡ್ರಾಲಿಕ್ ಸಿಸ್ಟಮ್ ಸಮಸ್ಯೆಯನ್ನು ಹೊಂದಿತ್ತು ಮತ್ತು ನಂತರ ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು ಎಂದು ಮೂಲಗಳು ತಿಳಿಸಿವೆ. ಘಟನೆಯ ಕುರಿತು ಇಂಡಿಗೋದಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ.
ಇದಕ್ಕೂ ಮೊದಲು, ಭುವನೇಶ್ವರದಿಂದ ದೆಹಲಿಗೆ ಬರುತ್ತಿದ್ದ ಇಂಡಿಗೋ ವಿಮಾನವು ಬಿಜು ಪಟ್ನಾಯಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (BPIA) ತುರ್ತು ಲ್ಯಾಂಡಿಂಗ್ ನಡೆಸಿತು, ಒಂದು ಹಕ್ಕಿ ಹೊಡೆದ ಪರಿಣಾಮವಾಗಿ ತಾಂತ್ರಿಕ ದೋಷವನ್ನು ಅನುಭವಿಸಿತು.