ಇಸ್ಲಾಮಾಬಾದ್: ಶಾರ್ಜಾದಿಂದ ಲಕ್ನೋಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಕಾರಣದಿಂದ ವಿಮಾನವನ್ನು ಪಾಕಿಸ್ತಾನದ ಕರಾಚಿಯಲ್ಲಿ ತುರ್ತಾಗಿ ಇಳಿಸಿದ ಘಟನೆ ಮಂಗಳವಾರ(ಮಾರ್ಚ್ 02) ನಡೆದಿದೆ.
ಇದನ್ನೂ ಓದಿ:ಹತ್ರಾಸ್ ಲೈಂಗಿಕ ಕಿರುಕುಳ ಕೇಸ್: ಮಗಳ ಎದುರಲ್ಲೇ ತಂದೆಯನ್ನು ಹತ್ಯೆಗೈದ ಆರೋಪಿ
ಇಂಡಿಗೋ ಏರ್ ಲೈನ್ಸ್ ಶಾರ್ಜಾದಿಂದ ಲಕ್ನೋಗೆ ಹೊರಟಿದ್ದು, ಈ ಸಂದರ್ಭದಲ್ಲಿ ಪ್ರಯಾಣಿಕರೊಬ್ಬರು ತೀವ್ರ ಹೃದಯ ಸ್ತಂಭನದಿಂದ ಕುಸಿದು ಬಿದ್ದಿದ್ದರು. ಕೂಡಲೇ ವಿಮಾನವನ್ನು ಪಾಕಿಸ್ತಾನದ ದಕ್ಷಿಣ ನಗರವಾದ ಕರಾಚಿಯಲ್ಲಿ ತುರ್ತಾಗಿ ಲ್ಯಾಂಡಿಂಗ್ ಮಾಡಿರುವುದಾಗಿ ವರದಿ ವಿವರಿಸಿದೆ.
ವಿಮಾನದಲ್ಲಿಯೇ ಹೃದಯಸ್ತಂಭನಕ್ಕೊಳಗಾದ ಪ್ರಯಾಣಿಕರಿಗೆ ಸಾಧ್ಯವಾದ ಎಲ್ಲಾ ವೈದ್ಯಕೀಯ ನೆರವು ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿರುವುದಾಗಿ ಇಂಡಿಗೋ ಪ್ರಕಟಣೆಯಲ್ಲಿ ತಿಳಿಸಿದೆ.
ವೈದ್ಯಕೀಯ ಚಿಕಿತ್ಸೆಗಾಗಿ ಇಂಡಿಗೋ ವಿಮಾನವನ್ನು ಕರಾಚಿಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿತ್ತು. ಆದರೆ ಅವರು ಅಷ್ಟರಲ್ಲಾಗಲೇ ಸಾವನ್ನಪ್ಪಿರುವುದಾಗಿ ಕರಾಚಿಯಲ್ಲಿ ವೈದ್ಯರು ಘೋಷಿಸಿದ್ದು, ಇದೊಂದು ತುಂಬಾ ದುಃಖಕರ ವಿಷಯ, ಮೃತ ಪ್ರಯಾಣಿಕರ ಕುಟುಂಬಕ್ಕೆ ಸಾಂತ್ವಾನ ವ್ಯಕ್ತಪಡಿಸಿರುವುದಾಗಿ ಇಂಡಿಗೋ ಪ್ರಕಟಣೆಯಲ್ಲಿ ತಿಳಿಸಿದೆ.