ಬೆಂಗಳೂರು: ಸುಭಾಷ್‌ನಗರ ವಾರ್ಡ್‌ನ ಇಂದಿರಾ ಕ್ಯಾಂಟೀನ್‌ಗೆ ಬಣ್ಣ ಬಳಿದಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಇಂದಿರಾನಗರ ಕ್ಯಾಂಟೀನ್‌ಗೆ ಪ್ರತ್ಯೇಕ ಬಣ್ಣ ಬಳಿದು ಇಂದಿರಾ ಕ್ಯಾಂಟೀನ್ ಯೋಜನೆಯ ಮೂಲ ಉದ್ದೇಶಕ್ಕೆ ಧಕ್ಕೆ ತರಲಾಗಿದೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.
ಪಾಲಿಕೆ ವತಿಯಿಂದ ನಗರದಲ್ಲಿ ನಿರ್ಮಾಣವಾಗಿರುವ 170ಕ್ಕೂ ಹೆಚ್ಚು ಇಂದಿರಾ ಕ್ಯಾಂಟೀನ್‌ಗಳು ಒಂದೇ ಮಾದರಿಯಲ್ಲಿರಬೇಕು ಎಂಬ ಉದ್ದೇಶದಿಂದ ಫ್ರಿ ಫ್ಯಾಬ್ರಿಕೇಟೆಡ್ ಉತ್ಪನ್ನಗಳನ್ನು ಬಳಸಿ ಒಂದೇ ಮಾದರಿಯಲ್ಲಿ ನಿರ್ಮಾಣ ಮಾಡಲಾಗಿದೆ. ಯೋಜನೆಯ ಮೂಲ ಉದ್ದೇಶದ ಅಂಶಗಳಲ್ಲಿ ಕ್ಯಾಂಟೀನ್‌ಗಳೆಲ್ಲವೂ ಒಂದೇ ಮಾದರಿಯಲ್ಲಿ ಇರಬೇಕು ಎಂಬುದೂ ಆಗಿತ್ತು.
ಆದರೆ, ಇದೀಗ ಸುಭಾಷ್ ನಗರ ವಾರ್ಡ್‌ನ ಇಂದಿರಾ ಕ್ಯಾಂಟೀನ್‌ಗೆ ಪ್ರತ್ಯೇಕ ಬಣ್ಣ ಬಳಿದಿರುವುದು ಸರಿಯೇ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಜತೆಗೆ ಯೋಜನೆಯ ಮೂಲ ಉದ್ದೇಶಕ್ಕೆ ಧಕ್ಕೆ ತಂದು ಪ್ರತ್ಯೇಕ ಬಣ್ಣ ಬಳಿಯುವ ಅಗತ್ಯ ಏನಿತ್ತು ಎಂದು ಪ್ರಶ್ನಿಸುತ್ತಿದ್ದಾರೆ.
ಇಂದಿರಾ ಕ್ಯಾಂಟೀನ್‌ಗಳಿಗೆ ಯಾವುದೇ ಕಾರಣಕ್ಕೂ ಪ್ರತ್ಯೇಕ ಬಣ್ಣ ಬಳಿಯಬಾರದು ಎಂದು ಸೂಚಿಸಲಾಗಿದೆ. ಸುಭಾಷ್ ನಗರ ವಾರ್ಡ್‌ನ ಇಂದಿರಾ ಕ್ಯಾಂಟೀನ್‌ಗೆ ಯಾರು ಬಣ್ಣ ಬಳಿದಿದ್ದಾರೆ. ಯಾವ ಉದ್ದೇಶಕ್ಕಾಗಿ ಬಳಿಯಲಾಗಿದೆ ಎಂದು ಅಧಿಕಾರಿಗಳಿಗೆ ಮಾಹಿತಿ ಕೇಳಲಾಗಿದೆ. ಮಾಹಿತಿ ಆಧರಿಸಿ ಸೂಕ್ತ ಕ್ರಮ ಜರುಗಿಸಲಾಗುತ್ತದೆ
-ಮಂಜುನಾಥ್ ಪ್ರಸಾದ್, ಪಾಲಿಕೆ ಆಯುಕ್ತ