Advertisement

ಇಂದಿರಾ ಕ್ಯಾಂಟೀನ್ ಯೋಜನೆ ಗೋಲ್ ಮಾಲ್; ಸಿಎಂ, ಜಾರ್ಜ್ ವಿರುದ್ಧ ದೂರು 

05:56 PM Jul 20, 2017 | Team Udayavani |

ಬೆಂಗಳೂರು:ಇಂದಿರಾ ಕ್ಯಾಂಟೀನ್ ಯೋಜನೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಕೆಜೆ ಜಾರ್ಜ್ ಸೇರಿದಂತೆ ನಾಲ್ವರ ವಿರುದ್ಧ ಲೋಕಾಯುಕ್ತ ಹಾಗೂ ಎಸಿಬಿಯಲ್ಲಿ ದೂರು ದಾಖಲಿಸಿದ್ದಾರೆ.

Advertisement

ಇಂದಿರಾ ಕ್ಯಾಂಟಿನ್ ಯೋಜನೆಯಲ್ಲಿ ಸುಮಾರು 65 ಕೋಟಿ ರೂಪಾಯಿಯಷ್ಟು ಗೋಲ್ ಮಾಲ್ ನಡೆದಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

ಸಿದ್ದರಾಮಯ್ಯ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದೆನಿಸಿರುವ ‘ಇಂದಿರಾ ಕ್ಯಾಂಟೀನ್’ ಯೋಜನೆ ಭರದಿಂದ ಸಾಗಿದೆ. ಆಗಸ್ಟ್ 15ರಂದು ಕ್ಯಾಂಟೀನ್ ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ. ಏತನ್ಮಧ್ಯೆ ಇಂದಿರಾ ಕ್ಯಾಂಟೀನ್ ಯೋಜನೆಗೆ ಅಡ್ಡಿ ಉಂಟಾದಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next