Advertisement

ಎಲ್ಲ ಜಿಲ್ಲೆಗಳಲ್ಲಿ ನವೆಂಬರ್‌ ಒಳಗೆ ಇಂದಿರಾ ಕ್ಯಾಂಟೀನ್‌

07:10 AM Sep 11, 2017 | Team Udayavani |

ಬಳ್ಳಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಿಸಿದ್ದ ಇಂದಿರಾ ಕ್ಯಾಂಟೀನ್‌ ಅನ್ನು ನವೆಂಬರ್‌ 1ರಿಂದ 20ರೊಳಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಆರಂಭಿಸಲಾಗುವುದು ಎಂದು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಭಾರತಿ ಶಂಕರ್‌ ತಿಳಿಸಿದರು. 

Advertisement

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 30 ಜಿಲ್ಲಾ ಕೇಂದ್ರಗಳಲ್ಲಿ ಸ್ತ್ರೀಶಕ್ತಿ ಒಕ್ಕೂಟಗಳ ಮೂಲಕ ಇಂದಿರಾ ಸವಿರುಚಿ ಕೈ ತುತ್ತು ಕ್ಯಾಂಟೀನ್‌ ಆರಂಭಿಸಲಾಗುತ್ತಿದೆ. 2018ರ ಮಾರ್ಚ್‌ ತಿಂಗಳೊಳಗೆ ಎಲ್ಲ ತಾಲೂಕುಗಳಿಗೆ ಇದನ್ನು ವಿಸ್ತರಿಸಲಾಗುವುದು. ಪ್ರತಿ ತಾಲೂಕಿನ ಸ್ತ್ರೀ ಶಕ್ತಿ ಒಕ್ಕೂಟಗಳ ಗುಂಪಿನಿಂದ ಮಹಿಳೆಯರನ್ನು ಆಯ್ಕೆ ಮಾಡಿ ಜಿಲ್ಲಾ ಕೇಂದ್ರಗಳಲ್ಲಿ ಸ್ತ್ರೀ ಶಕ್ತಿ ಒಕ್ಕೂಟ ರಚಿಸಿ, ಈ ಕ್ಯಾಂಟೀನ್‌ ಉಸ್ತುವಾರಿ ವಹಿಸಲಾಗುವುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next